ಕುಂದಾಪುರ ತಾಲೂಕು ಭೂ ನ್ಯಾಯ ಮಂಡಳಿಗೆ ರಮೇಶ್ ಶೆಟ್ಟಿ ವಕ್ವಾಡಿ ಆಯ್ಕೆ

Views: 117
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ರಮೇಶ್ ಶೆಟ್ಟಿ ವಕ್ವಾಡಿ ಅವರನ್ನು ಆಯ್ಕೆ ಮಾಡಿ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಆದೇಶಿಸಿದೆ.
ಇತ್ತೀಚಿಗಷ್ಟೇ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ ಕೆ ಡಿ ಪಿ ಸಮಿತಿಗೆ ಸದಸ್ಯರನ್ನಾಗಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಕಾಳಾವರ ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ಶೆಟ್ಟಿ ವಕ್ವಾಡಿ ಸಕ್ರಿಯವಾಗಿ ತಮ್ಮನ್ನು ತಾವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು. ಸ್ಥಳೀಯವಾಗಿ ಜನಪ್ರಿಯತೆ ಹೊಂದಿದ ಅವರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಸಮಾಜ ಸೇವಾ ಕೈಂಕರ್ಯ, ನೇರ ನಡೆ ನುಡಿಯ ಅವರನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕುಂದಾಪುರ ಸಿಟಿ ಸೆಲ್ ವಿಭಾಗದ ಅಧ್ಯಕ್ಷರಾಗಿ ಈ ಹಿಂದೆ ಸೇವೆ ಸಲ್ಲಿಸಿದ್ದಾರೆ.
ಸದ್ಯ ಅವರು ಕುಂದಾಪುರ ತಾಲೂಕು ಪಂಚಾಯತ್ ರಾಜ್ಯ ಒಕ್ಕೂಟ( ರಿ) ಕುಂದಾಪುರ ವಲಯದ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.