ಇತರೆ

ಕುಂದಾಪುರ: ತ್ರಾಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಗಂಭೀರ ಗಾಯ

Views: 412

ಕುಂದಾಪುರ: ತ್ರಾಸಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕಾರು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ತ್ರಾಸಿಯ ನಿವಾಸಿ ಗೌರಿ ಶೆಟ್ಟಿಗಾರ್‌ (60) ಗಂಭೀರ ಗಾಯಗೊಂಡಿದ್ದಾರೆ.

ಬೈಂದೂರು ಕಡೆಯಿಂದ ಕುಂದಾಪುರದತ್ತ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದು  ಮಹಿಳೆ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ.

ತತ್‌ಕ್ಷಣ ಗಂಗೊಳ್ಳಿಯ 24×7 ಆ್ಯಂಬುಲೆನ್ಸ್‌ನ ಇಬ್ರಾಹಿಂ ಗಂಗೊಳ್ಳಿ ಅವರು ಧಾವಿಸಿ ಗಾಯಾಳುವನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದ ದೃಶ್ಯಾವಳಿ ಮಳಿಗೆಯೊಂದರ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!