ಕರಾವಳಿ

ಕುಂದಾಪುರ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ

Views: 255

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ನಂಜಪ್ಪ ಎನ್ (59) ಅವರು ಅಸೌಖ್ಯದಿಂದ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಂಜಪ್ಪ ಅವರು ಎರಡು ದಿನಗಳ ಹಿಂದೆ ಉಡುಪಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

2003ರಲ್ಲಿ ಉಪನಿರೀಕ್ಷಕರಾಗಿ ಸೇವೆಗೆ ನಿಯುಕ್ತಿಯಾಗಿದ್ದ ನಂಜಪ್ಪ, ಶಿವಮೊಗ್ಗ, ದಾವಣಗೆರೆ, ಹಾವೇರಿ ಮೊದಲಾದೆಡೆ ಕರ್ತವ್ಯ ನಿರ್ವಹಿಸಿದ್ದು ಬಳಿಕ ಪೊಲೀಸ್‌ ನಿರೀಕ್ಷಕರಾಗಿ ಆಗಿ ಬಡ್ತಿ ಹೊಂದಿ, ಕಡೂರು, ಭದ್ರಾವತಿ ಯಲ್ಲಿ ಹಾಗೂ ಪ್ರಸ್ತುತ ನಾಲ್ಕು ವರ್ಷಗಳಿಂದ ಗಂಗೊಳ್ಳಿ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

2024ರ ಆಗಸ್ಟ್ 27 ರಂದು ಕುಂದಾಪುರ ವೃತ್ತ ನಿರೀಕ್ಷಕರಾಗಿ ನಿಯುಕ್ತಿಗೊಂಡಿದ್ದ ನಂಜಪ್ಪ ಅವರು, ಕುಂದಾಪುರದಲ್ಲಿ 9 ತಿಂಗಳುಗಳ ಕಾಲ ಸೇವೆ ಸಲ್ಲಿಸಿದ್ದಾರೆ.ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related Articles

Back to top button