ಇತರೆ

ಕುಂದಾಪುರ: ನೂಜಿಯಲ್ಲಿ ಅಂಗನವಾಡಿ ಶಾಲೆ ಎದುರಿನ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ 

Views: 274

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ನೂಜಿ ಸಮೀಪ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹೆಸ್ಕತ್ತೂರು ನಿವಾಸಿ ಮಂಜುನಾಥ (47) ಆತ್ಮಹತ್ಯೆ ಮಾಡಿಕೊಂಡವರು.

ಇವರು ಕಳೆದ ಒಂದು ವರ್ಷದಿಂದ ಅನಾರೋಗ್ಯ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದರು. ರಾತ್ರಿ ಊಟದ ಬಳಿಕ ಮನೆಯ ಹೊರಗೆ ಕುಳಿತಿದ್ದ ಮಂಜುನಾಥ ಬಳಿಕ ಕಾಣೆಯಾಗಿದ್ದು, ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಮನೆ ಸಮೀಪದ ಅಂಗನವಾಡಿ ಶಾಲೆಯ ಎದುರಿನ ಮಾಡಿನ ಪಕ್ಕಾಸಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಕೂಡಲೆ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ. ಪತ್ನಿ ಲಕ್ಷ್ಮೀ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!