ರಾಜಕೀಯ

ಕುಂದಾಪುರ: ಪುರಸಭೆ ಅಧ್ಯಕ್ಷರಾಗಿ ಮೋಹನ ದಾಸ ಶೆಣೈ, ಉಪಾಧ್ಯಕ್ಷೆಯಾಗಿ ವನಿತಾ ಬಿಲ್ಲವ ಆಯ್ಕೆ 

Views: 205

ಕುಂದಾಪುರ: ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿಯ ಮೋಹನ ದಾಸ ಶೆಣೈ, ಉಪಾಧ್ಯಕ್ಷೆಯಾಗಿ ಬಿಜೆಪಿಯ ವನಿತಾ ಬಿಲ್ಲವ ಆಯ್ಕೆಯಾಗಿದ್ದಾರೆ.

ಮೀಸಲಾತಿಯಂತೆ ಅಧ್ಯಕ್ಷತೆಗೆ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷತೆ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಮೋಹನ ದಾಸ್ ಶೆಣೈ, ಕಾಂಗ್ರೆಸ್ ನಿಂದ ಚಂದ್ರಶೇಖರ್ ಖಾರ್ವಿ, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ವನಿತಾ ಬಿಲ್ಲವ ಪಕ್ಷೇತರ ಅಭ್ಯರ್ಥಿ ಕಮಲ ಮಂಜುನಾಥ್ ಪೂಜಾರಿ ನಾಮಪತ್ರ ಸಲ್ಲಿಸಿದ್ದರು.

ಬಿಜೆಪಿ 14 ಸದಸ್ಯಬಲ ಕಾಂಗ್ರೆಸ್ 8 ಸದಸ್ಯ ಬಲ ಹೊಂದಿದೆ. ಕಾಂಗ್ರೆಸ್ ನ ಸದಸ್ಯೆ ಲಕ್ಷ್ಮೀ ಬಾಯಿ  ಗೈರಾಗಿದ್ದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ 16 ಹಾಗೂ ಕಾಂಗ್ರೆಸ್ 7 ಪಕ್ಷೇತರ 1 ಸದಸ್ಯರ ಹಾಜರಾತಿ ಇತ್ತು. ಬಿಜೆಪಿ 16 ಮತಗಳನ್ನು ಕಾಂಗ್ರೆಸ್ 8 ಮತಗಳನ್ನು ಪಡೆಯಿತು.ನಿರೀಕ್ಷೆಯಂತೆ ಬಿಜೆಪಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಒಲಿದು ಬಂದಿದೆ.

ತಹಶೀಲ್ದಾರ್ ಶೋಭಾಲಕ್ಷ್ಮೀ ಮತದಾನ ಪ್ರಕ್ರಿಯೆ ನಡೆಸಿದರು. ಮುಖ್ಯಾಧಿಕಾರಿ ಆನಂದ ಜೆ. ಉಪಸ್ಥಿತರಿದ್ದರು.ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ರಾದ ಸುರೇಶ್ ಶೆಟ್ಟಿ ಗೊಪಾಡಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ.ಎಸ್ ಉಪಸಿತರಿದ್ದರು.

 

 

Related Articles

Back to top button