ಇತರೆ

ಕುಂದಾಪುರ: ಬಸ್ರೂರು ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ :ಇಬ್ಬರು ಯುವಕರ ಬಂಧನ

Views: 887

ಕನ್ನಡ ಕರಾವಳಿ ಸುದ್ದಿ: ಸಾರ್ವಜನಿಕ ಸ್ಥಳದಲ್ಲಿ  ಅಮಲು ಪದಾರ್ಥ ಸೇವಿಸಿದ ಅನುಮಾನದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಯುವಕರನ್ನು ವಶಕ್ಕೆ ಪಡೆದಿರುವ ಘಟನೆ ಕುಂದಾಪುರ ತಾಲೂಕು ಬಸ್ರೂರು ಬಸ್ ನಿಲ್ದಾಣದ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ.

ಬಂಧಿತ ಆರೋಪಿಗಳನ್ನು ನವನೀತ ಮತ್ತು ಹರ್ಷ ಎಂದು ಗುರುತಿಸಲಾಗಿದೆ.

ಇಬ್ಬರು ಯುವಕರು ಅಮಲು ಪದಾರ್ಥ ಸೇವಿಸಿರುವ ಕುರಿತು ಅನುಮಾನದ ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿ ಸ್ಥಳದಲ್ಲೇ ಇಬ್ಬರೂ ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ವೈದ್ಯಾಧಿಕಾರಿಯವರಿಂದ ಆರೋಪಿಗಳು ಗಾಂಜಾ ಸೇವಿಸಿರುವ ಕುರಿತು ದೃಢಪಡಿಸಿಕೊಂಡ ಪೊಲೀಸರು ಆರೋಪಿಗಳ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ, ಸಿಬ್ಬಂದಿ ರಾಜು ಬಿ ಹಾಗೂ ಕಿಶನ್ ಗೌಡ ಅವರು ರೌಂಡ್ಸ್‌ನಲ್ಲಿರುವ ವೇಳೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Related Articles

Back to top button