ಇತರೆ

ಕುಂದಾಪುರ: ಬಸ್ಸಿಗೆ ಬೈಕ್ ಡಿಕ್ಕಿ,ಸವಾರ ಸಾವು, ಬೆಂಕಿ ಹೊತ್ತಿಉರಿದ ಬೈಕ್ 

Views: 732

ಕನ್ನಡ ಕರಾವಳಿ ಸುದ್ದಿ:ಬಸ್ಸಿಗೆ ಬೈಕ್ ಡಿಕ್ಕಿಯಾಗಿ  ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ  ಸೋಮವಾರ ಮಧ್ಯಾಹ್ನ ಹೆಮ್ಮಾಡಿ-ವಂಡ್ಸೆ ರಸ್ತೆಯ ಮಲ್ಲಾರಿ ಬಳಿ ಸಂಭವಿಸಿದೆ.

ಮೃತ ಬೈಕ್ ಸವಾರ ಸಿಗಂದೂರಿನ ಶರತ್‌ (25) ಎಂದು ಗುರುತಿಸಲಾಗಿದೆ.

ಸಿಗಂದೂರು ನಿಂದ ಕುಂದಾಪುರಕ್ಕೆ ಸಂಬಂಧಿಕರ ಮನೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಕೆಂಚನೂರು ಮಲ್ಲಾರಿ ಬಳಿ ರಸ್ತೆಯ ತಿರುವಿನಲ್ಲಿ ಸವಾರ ನಿಯಂತ್ರಣ ತಪ್ಪಿ ಹೆಮ್ಮಾಡಿ ಕಡೆಯಿಂದ ವಂಡ್ಸೆ ಕಡೆಗೆ ಹೋಗುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಶರತ್ ಸ್ಥಳದಲ್ಲೇ ಮೃತ ಪಟ್ಟಿದ್ದು ಬೈಕ್ ಸಂಪೂರ್ಣ ಬೆಂಕಿಯಿಂದಾಗಿ ಸುಟ್ಟು ಕರಕಲಾಗಿದೆ.

ಕುಂದಾಪುರ ಸಂಚಾರ ಠಾಣೆ ಪೊಲೀಸ್ ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Related Articles

Back to top button
error: Content is protected !!