ಜನಮನ
ಕುಂದಾಪುರ: ಮೇ.29 ರಂದು ಜಯಾನಂದ ಖಾರ್ವಿ ಶೃದ್ಧಾಂಜಲಿ ಸಭೆ

Views: 100
ಕನ್ನಡ ಕರಾವಳಿ ಸುದ್ದಿ: ಹಿರಿಯ ವಾಲಿಬಾಲ್ ಆಟಗಾರ, ಧಾರ್ಮಿಕ ಹಾಗೂ ಕೊಂಕಣ ಖಾರ್ವಿ ಸಮಾಜದ ಮುಂದಾಳು ಜಯಾನಂದ ಖಾರ್ವಿ ಅವರು ನಿಧನರಾಗಿರುವುದು ದುಃಖಕರ ವಿಚಾರ. ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ತನ್ನನ್ನು ತೊಡಗಿಸಿಕೊಂಡಿದ್ದ ಜಯಾನಂದರಿಗೆ ಮೇ29 ರಂದು ಸಂಜೆ 5.00 ಗಂಟೆಗೆ ಕುಂದಾಪುರದ ಬೋರ್ಡ್ ಹೈಸ್ಕೂಲಿನ ಶ್ರೀ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ ಸಾರ್ವಜನಿಕ ಶೃದ್ದಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಶ್ರೀಯುತರಿಗೆ ಶೃದ್ಧಾಂಜಲಿ ಸಲ್ಲಿಸುವರೇ, ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.