ಇತರೆ
ಕುಂದಾಪುರ ವಡೇರಹೋಬಳಿಯ ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ

Views: 246
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ವಡೇರಹೋಬಳಿಯ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನ ಕ್ಯಾಂಪಿಗೆ ಹೋಗಿ ಬರುತ್ತೇನೆ ಎಂದು ಮನೆ ಬಿಟ್ಟು ಹೋದವಳು ನಾಪತ್ತೆಯಾಗಿದ್ದಾಳೆ.
ಪೂಜಿತಾ 21 ವರ್ಷ ವಯಸ್ಸಿನ ಯುವತಿ ನಾಪತ್ತೆಯಾದವಳು. ಈಕೆ ಬ್ರಹ್ಮಾವರ ಸಮೀಪದ ನರ್ಸಿಂಗ್ ಕಾಲೇಜೊಂದರಲ್ಲಿ ಎರಡನೇ ವರ್ಷದ ನರ್ಸಿಂಗ್ ಮಾಡುತ್ತಿದ್ದಳು. ಜೂನ್ 13ರಂದು ಬೆಳಿಗ್ಗೆ 8 ಗಂಟೆಗೆ ಮಂಗಳೂರಿಗೆ ಕ್ಯಾಂಪ್ ಗೆ ಹೋಗಲಿಕ್ಕೆ ಇದೆ ಎಂದು ಹೇಳಿ ಹೋದವರು ಮನೆಗೆ ಬಾರದೇ ನಾಪತ್ತೆಯಾಗಿದ್ದಾಳೆ. ಗಾಬರಿಗೊಂಡ ಮನೆಯವರು ಕಾಲೇಜಿನಲ್ಲಿ ವಿಚಾರಿಸಿದಾಗ ಮಂಗಳೂರಿನಲ್ಲಿ ಯಾವುದೇ ಕ್ಯಾಂಪ್ ಇರುವುದಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ತಂದೆ ರವಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.