ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವಿದ್ಯಾರಣ್ಯ ಶಾಲೆ, ರಾಜ್ಯಕ್ಕೆ 3ನೇ ರ್ಯಾಂಕ್, ಟಾಪ್ 10ರ ಒಳಗೆ 6 ರ್ಯಾಂಕ್

Views: 162
ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ಶಿಕ್ಷಣ ಇಲಾಖೆ ಪ್ರಕಟಿಸಿದ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ 2025 ರಲ್ಲಿ ಕುಂದಾಪುರದ ಯಡಾಡಿ-ಮತ್ಯಾಡಿಯ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ 10ರೊಳಗಿನ 6 ರ್ಯಾಂಕ್ಗಳನ್ನು ಪಡೆದು ಅಮೋಘ ಸಾಧನೆಗೈದಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿನಿ ಪ್ರಾವ್ಯ ಪಿ. ಶೆಟ್ಟಿ 625ಕ್ಕೆ 623 ಅಂಕಗಳಿಸುವುದರ ಮೂಲಕ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದಿದ್ದಾಳೆ. ಸಂಸ್ಥೆಯ ವಿದ್ಯಾರ್ಥಿ ಆಯುಷ್ ಯು ಶೆಟ್ಟಿ 625ಕ್ಕೆ 622 ಅಂಕ ಗಳಿಸುವುದರ ಮೂಲಕ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದಿದ್ದಾನೆ.ಸಂಸ್ಥೆಯ ವಿದ್ಯಾರ್ಥಿನಿ ಅನುಶ್ರೀ 625ಕ್ಕೆ 620 ಅಂಕ ಗಳಿಸುವುದರ ಮೂಲಕ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾಳೆ. ಅಪೇಕ್ಷಾ ಶೆಟ್ಟಿ 625ಕ್ಕೆ 619 ಅಂಕಗಳಿಸುವುದರ ಮೂಲಕ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದಿದ್ದಾಳೆ. ಸುಖಿ ಎಸ್. ಶೆಟ್ಟಿ 625 ಕ್ಕೆ 618 ಅಂಕಗಳಿಸುವುದರ ಮೂಲಕ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿದ್ದಾಳೆ. ದರ್ಶನ್ ಕೆ.ಯು. 625 ಕ್ಕೆ 616 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದಿದ್ದಾನೆ.
ರೀಮಾ ಪ್ರಕಾಶ್ ಶೆಟ್ಟಿ 625ಕ್ಕೆ 615 ಅಂಕ, ಎಸ್.ಆರ್. ರಿತೇಶ 615, ಅಭಿಲಾಷ್ 613, ಆದಿತ್ಯ ಬಸವರಾಜ್ 613, ಕನ್ನಿಕ 613, ವೈಷ್ಣವಿ 606, ನಯನ ಕೆ 604, ರಜತಕುಮಾರ್ ಶೆಟ್ಟಿ 604, ಮೇದಿತ್ ಶೆಟ್ಟಿ 602, ಅವಿನಾಶ್ ಉಡುಪ 599, ಸನ್ವಿತ್ ಎಸ್. ಶೆಟ್ಟಿ 599, ಆಶಿಕ್ ಯುಕೆ 597, ಋತು ರಾಜಶೇಖರ್ 596, ಅಂಕಿತ ಕೆದ್ಲಾಯ 594 , ಶ್ರೀಶ 594, ಶನಾಯ 593, ಸ್ಪಂದನ 591, ಸೃಷ್ಟಿ 591, ಮಿಶಾ ಶೆಟ್ಟಿ 589, ಶಶಾಂಕ್ 588, ತನ್ಮಯ್ 588, ಆಕಾಂಕ್ಷ 587, ನಚಿಕೇತ್ 587, ಪ್ರೇಕ್ಷಾ 587, ರಿತ್ವಿಜ್ 585, ವಿಕಾಸ್ ಜೆ.ಕೆ. 584, ಆರ್ಯನ್ 583, ಪಾರ್ಥಸಾರಥಿ 582, ಸುವಾನ್ 581, ರೋಹನ್ 580, ಶ್ರೇಯಾ ಬಿ 580, ತನ್ಮಯ್ ಜೆ. ರಾವ್ 580 ಅಂಕಗಳನ್ನು ಪಡೆದಿದ್ದಾರೆ. ಪರೀಕ್ಷೆ ಬರೆದ 107 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ, 21 ವಿದ್ಯಾರ್ಥಿಗಳು 95%ಕ್ಕಿಂತ ಅಧಿಕ ಅಂಕ ಪಡೆದರೆ ,62 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಅಂಕ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ,ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಮತ್ತು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಹಾಗೂ ಖಜಾಂಚಿ ಭರತ್ ಶೆಟ್ಟಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯಕ್ಕೆ ಮೂರನೇ ರ್ಯಾಂಕ್ ಪಡೆದ ಕುಂದಾಪುರದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಾವ್ಯ ಪಿ ಶೆಟ್ಟಿಗೆ ವೈದ್ಯೆಯಾಗುವ ಆಸೆ
ಕುಂದಾಪುರದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾವ್ಯ ಪಿ.ಶೆಟ್ಟಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ್ದು ತನ್ನ ಉತ್ತಮ ಸಾಧನೆಯಿಂದ ಸಂತಸ ಗೊಂಡಿರುವ ಪ್ರಾವ್ಯ ಪಿ. ಶೆಟ್ಟಿ ಮಾತನಾಡುತ್ತಾ “ತನ್ನ ಈ ಉತ್ಕೃಷ್ಟವಾದ ಫಲಿತಾಂಶವನ್ನು ನಾನು ಮೊದಲೇ ನಿರೀಕ್ಷಿಸಿದ್ದೆ. ತನ್ನ ಈ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಯ ಸಹಕಾರವೇ ಕಾರಣ. ಶಾಲೆಯಲ್ಲಿನ ಅತ್ಯುತ್ತಮವಾದ ಬೋಧನೆ, ನಿರಂತರವಾಗಿ ನಡೆಸುತ್ತಿದ್ದ ಪೂರ್ವ ತಯಾರಿ ಪರೀಕ್ಷೆಗಳು, ಪರೀಕ್ಷಾ ಸಮಯದಲ್ಲಿ ಶಾಲೆಯಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಗಾರಗಳು, ಸಹಪಠ್ಯ ಚಟುವಟಿಕೆಗಳು ತುಂಬಾ ಸಹಾಯವಾಗಿದ್ದು ಉತ್ತಮ ಸಾಧನೆಗೆ ಸಹಾಯವಾಯಿತು. ನಾನು ಹಾಸ್ಟೆಲ್ ನ ವಿದ್ಯಾರ್ಥಿನಿಯಾಗಿದ್ದು ಹಾಸ್ಟೆಲ್ ನ ಸ್ಟಡಿ ಅವರ್ಸ್, ಹಾಸ್ಟೆಲ್ ಶಿಕ್ಷಕರು, ಹಾಸ್ಟೆಲ್ ವಾರ್ಡನ್ ಎಲ್ಲರ ಸಹಕಾರದಿಂದ ಈ ಸಾಧನೆ ಸಾಧ್ಯವಾಯಿತು. ವಿಶೇಷವಾಗಿ ನಮ್ಮ ಶಾಲೆಯಲ್ಲಿ ಆರನೇ ತರಗತಿಯಿಂದಲೇ ಬೋಧಿಸುತ್ತಿರುವ ಐಐಟಿ/ನೀಟ್ ಫೌಂಡೇಶನ್ ಕೋರ್ಸ್ ನ ಮಾಸಿಕ ಪರೀಕ್ಷೆಗಳು ಜಟಿಲವಾದ ಪ್ರಶ್ನೆಗಳನ್ನು ಸರಳವಾಗಿ ಉತ್ತರಿಸಲು ನೆರವಾಯಿತು. ಮುಂದೆ ವೈದ್ಯೆಯಾಗಿ ಜನರ ಸೇವೆ ಮಾಡುವ ಆಸೆ ಇದೆ. ಪಿಯುಸಿ ಶಿಕ್ಷಣವನ್ನು ನಮ್ಮದೇ ಸುಜ್ಞಾನ ಪಿಯು ಕಾಲೇಜಿನಲ್ಲಿ ಮುಂದುವರಿಸುತ್ತೇನೆ.”
ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಪಡೆದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಆಯುಷ್ ಯು ಶೆಟ್ಟಿ
ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆಯುಷ್ ಶೆಟ್ಟಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 622 ಅಂಕಗಳಿಸಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಗಳಿಸಿದ್ದು ತನ್ನ ಉತ್ತಮ ಸಾಧನೆಯಿಂದ ಸಂತಸ ಗೊಂಡಿರುವ ವಿದ್ಯಾರ್ಥಿ ಮಾತನಾಡುತ್ತಾ “ತನ್ನ ಈ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಯ ಸಹಕಾರವೇ ಕಾರಣ ಶಾಲೆಯಲ್ಲಿನ ಉತ್ತಮ ಬೋಧನೆ, ಪರೀಕ್ಷಾ ಸಮಯದಲ್ಲಿ ಶಾಲೆಯಲ್ಲಿ ಆಯೋಜಿಸಿದ ವಿಶೇಷ ಕಾರ್ಯಗಾರಗಳು, ಪೂರ್ವ ತಯಾರಿ ಪರೀಕ್ಷೆಗಳು, ಫಲಿತಾಂಶ ಆಧಾರಿತ ವಿಶೇಷ ಗಮನ ಸಹಪಠ್ಯ ಚಟುವಟಿಕೆಗಳು ತುಂಬಾ ಸಹಾಯವಾಗಿದ್ದು ಉತ್ತಮ ಸಾಧನೆಗೆ ಸಹಾಯವಾಯಿತು” ಎಂದನು. ಮುಂದೆ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಂಡು ವೈದ್ಯನಾಗುವ ಕನಸನ್ನು ಹೊಂದಿದ್ದಾನೆ.
ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಅನುಶ್ರೀ
ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಶ್ರೀ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 620 ಅಂಕಗಳಿಸಿ ರಾಜ್ಯಕ್ಕೆ 6ನೇ ರ್ಯಾಂಕ್ ಗಳಿಸಿದ್ದು ತನ್ನ ಉತ್ತಮ ಸಾಧನೆಯಿಂದ ಸಂತಸ ಗೊಂಡಿರುವ ವಿದ್ಯಾರ್ಥಿನಿ ಮಾತನಾಡುತ್ತಾ ತನ್ನ ಈ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಯ ಸಹಕಾರವೇ ಕಾರಣ. ಶಾಲೆಯಲ್ಲಿನ ಉತ್ತಮ ಬೋಧನೆ, ಪರೀಕ್ಷಾ ಸಮಯದಲ್ಲಿ ಶಾಲೆಯಲ್ಲಿ ಆಯೋಜಿಸಿದ ವಿಶೇಷ ಕಾರ್ಯಗಾರಗಳು, ನಿರಂತರವಾಗಿ ಆಯೋಜಿಸಿದ ಪೂರ್ವ ತಯಾರಿ ಪರೀಕ್ಷೆಗಳು, ಸಾಮರ್ಥ್ಯ ಆಧಾರಿತ ಗುಂಪು ರಚನೆ ಮತ್ತು ಚಟುವಟಿಕೆಗಳು ತುಂಬಾ ಉಪಯೋಗವಾಗಿದ್ದು ಉತ್ತಮ ಸಾಧನೆಗೆ ಸಹಾಯವಾಯಿತು” ಎಂದಳು. ಮುಂದೆ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಂಡು ವೈದ್ಯೆಯಾಗುವ ಕನಸನ್ನು ಹೊಂದಿದ್ದಾಳೆ.