ಧಾರ್ಮಿಕ

ಕುಂಭಮೇಳದಲ್ಲಿ ಪಾಲ್ಗೊಂಡು ವಾಪಸ್ ಬರುವಾಗ ಅಪಘಾತ: ಐವರ ಸಾವು

Views: 163

ಕನ್ನಡ ಕರಾವಳಿ ಸುದ್ದಿ: ಕುಂಭಮೇಳದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದಾಗ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಐವರು ನೇಪಾಳಿ ಪ್ರಜೆಗಳು ಸಾವನ್ನಪ್ಪಿರುವ ಘಟನೆ ನಗರದ ಬಳಿ ನಡೆದಿದೆ.

ಅರ್ಚನಾ ಠಾಕೂರ್, ಇಂದು ದೇವಿ, ಮಂತರ್ಣಿ ದೇವಿ, ಬಾಲ ಕೃಷ್ಣ ಝಾ ಮತ್ತು ಚಾಲಕ ಮೃತಪಟ್ಟವರು. ಗಾಯಗೊಂಡಿರುವ ಮನೋಹರ್ ಠಾಕೂರ್, ಸೃಷ್ಟಿ ಠಾಕೂರ್, ಕಮ್ನಿ ಝಾ ಮತ್ತು ದೇವತರಣ್ ದೇವಿ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ಒಂಬತ್ತು ಜನರಿದ್ದರು. ಅವರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಶನಿವಾರ ಅಪಘಾತ ಸಂಭವಿಸಿದೆ. ಎಲ್ಲರೂ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಪ್ರಯಾಗ್‌ರಾಜ್‌ನಿಂದ ಹಿಂತಿರುಗುತ್ತಿದ್ದರು. ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಮೃತಪಟ್ಟಿದ್ದಾರೆ.

 

Related Articles

Back to top button
error: Content is protected !!