ಧಾರ್ಮಿಕ
ಕುಂಭ ಮೇಳದ ತ್ರಿವೇಣಿ ಸಂಗಮದಲ್ಲಿ ಭೀಕರ ಕಾಲ್ತುಳಿತ; 17 ಮಂದಿ ಸಾವು!

Views: 149
ಕನ್ನಡ ಕರಾವಳಿ ಸುದ್ದಿ: ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ಇಲ್ಲಿನ ತ್ರಿವೇಣಿ ಸಂಗಮದ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 17 ಮಂದಿ ಭಕ್ತರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಇದೇ ವೇಳೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಲ್ತುಳಿತದ ವೇಳೆ ನೂಕುನುಗ್ಗಲು ಉಂಟಾದಾಗ ಸ್ನಾನಕ್ಕೆ ಸೇರಿದ್ದ ಭಕ್ತರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಸ್ಥಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಶೂ, ಚಪ್ಪಲಿ, ಬಟ್ಟೆಗಳು ಘಟನೆಯ ಗಂಭೀರತೆಯನ್ನು ಸೂಚಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲವು ಅಖಾರಾಗಳು ಇದೀಗ ಅಮೃತ ಸ್ನಾನವನ್ನು ತಾತ್ಕಾಲಿಕವಾಗಿ ರದ್ದು ಮಾಡಿದ್ದಾರೆ.
ಸಂಕಷ್ಟದಲ್ಲಿ ಬೆಳಗಾವಿಯ ಭಕ್ತರು: ಕಾಲ್ತುಳಿತದ ವೇಳೆ ಕರ್ನಾಟಕದ ಬೆಳಗಾವಿಯಿಂದ ತೆರಳಿದ್ದ ಕೆಲವರು ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.