ಜನಮನ

ಕುಣಿಗಲ್‌ ನಲ್ಲಿ ಪುತ್ತೂರಿನ ಉದ್ಯಮಿ ಅಪಹರಿಸಿ 29 ಲ.ರೂ.ಗಳಿಗೂ ಹೆಚ್ಚು ದರೋಡೆ

Views: 56

ಕನ್ನಡ ಕರಾವಳಿ ಸುದ್ದಿ: ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯ ಟ್ರಾನ್ಸ್‌ಪೋರ್ಟ್ ಮಾಲೀಕನನ್ನು ಕುಣಿ ಬೈಪಾಸ್ ಸಮೀಪದಲ್ಲಿ ಅಡ್ಡಗಟ್ಟಿದ ಗರುಡ ಗ್ಯಾಂಗ್ ಅಪಹರಣ ಮಾಡಿ 29 ಲಕ್ಷ ರೂ.ಗಳಿಗೂ ಹೆಚ್ಚು ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.

ಇಟ್ಬಾಲ್ (35) ಅಪಹರಣವಾಗಿದ್ದ ವ್ಯಕ್ತಿ. ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಣಾಲು ನಿವಾಸಿಯಾಗಿದ್ದು ಅಶೋನ್ನಡ ಪೆಟ್ರೋಲಿಯಂ ಸಂಸ್ಥೆಯನ್ನು ಸ್ಥಾಪಿಸಿ ಟ್ರಾನ್ಸ್‌ಪೋರ್ಟ್ ನಡೆಸುತ್ತಿದ್ದಾರೆ.

ಜ. 24ರಂದು ಬೆಂಗಳೂರಿಗೆ ಬಂದಿದ್ದ ಇಟ್ಬಾಲ್ ತನ್ನ ವ್ಯವಹಾರ ಮುಗಿಸಿಕೊಂಡು ಹಣ ಸಂಗ್ರಹಿಸಿ ಸ್ನೇಹಿತನ ಮನೆಗೆ ಭೇಟಿ ನೀಡಿ ದಕ್ಷಿಣ ಕನ್ನಡಜಿಲ್ಲೆಗೆ ಹಿಂತಿರುಗಲು ನೆಲಮಂಗಲ ಮಾರ್ಗವಾಗಿ ಕಾರಿನಲ್ಲಿ ತೆರಳಿದ್ದರು. ರಾತ್ರಿಯಾಗಿದ್ದ ಹಿನ್ನೆಲೆಯಲ್ಲಿ ಕುಣಿಗಲ್‌ ಬೈಪಾಸ್‌ನಲ್ಲಿರುವ ಹೊಟೇಲ್ ನಲ್ಲಿ ಊಟ ಮುಗಿಸಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮುಂದೆ ಕಾರಿನಲ್ಲಿ ಚಲಿಸುತ್ತಿದ್ದಾಗ ಕೆಎ 02 ಎಂಎನ್ 8122 ನಂಬರಿನ ಟಯೋಟಾ ಇನೋವಾ ಕಾರಿನಲ್ಲಿ ಬಂದವರು  ಕಾರು ಅಡ್ಡಗಟ್ಟಿ ಅಟ್ಯಾಕ್ ಮಾಡಿ ಗರುಡ ಗ್ಯಾಂಗ್‌ ಎಂದು ಚಿತ್ರಹಿಂಸೆ ನೀಡಿ ವಿವಿಧ ಖಾತೆಗಳಿಗೆ 15 ಲಕ್ಷ ಹಣವನ್ನು ವರ್ಗಾವಣೆ ಮಾಡಿಕೊಂಡು ಕಾರಿನಲ್ಲಿದ್ದ 1.23 ಲಕ್ಷ ಹಣ ಪಡೆದು ಸಂಕಲೇಶಪುರದ ಕಡೆ ಅಪಹರಣ ಮಾಡಿಕೊಂಡು ಹೋಗಿದ್ದಾರೆ. 2 ದಿನದ ಅನಂತರ ಸಕಲೇಶಪುರದ ದೋಣಿಗಲ್ ರೆಸಾರ್ಟ್‌ಗೆ ಹೋಗಿ ಅಲ್ಲಿ ಇಟ್ಬಾಲ್ ಅಣ್ಣನಿಂದ 13 ಲಕ್ಷ ನಗದು ಹಣವನ್ನು ಪಡೆದು ಇಟ್ಬಾಲ್‌ ನನ್ನು ಬಿಟ್ಟು ಆತನ ಮೊಬೈಲ್ ಕಾರನ್ನು ತೆಗೆದುಕೊಂಡು ದೂರು ನೀಡಿದರೆ ನಿನ್ನ ಹತ್ಯೆ ಮಾಡಿಬಿಡುತ್ತೇವೆಂದು ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ.

ಈ ಘಟನೆಯಿಂದಾಗಿ ಹೆದರಿದ ಇಟ್ಬಾಲ್ ತಡವಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

 

Related Articles

Back to top button