ಇತರೆ
ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಇಬ್ಬರು ಸಾವು

Views: 33
ಕನ್ನಡ ಕರಾವಳಿ ಸುದ್ದಿ: ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ದಾರುಣ ಅಂತ್ಯವಾಗಿದೆ.
ಗ್ರಾಮದ ಭೀರಪ್ಪ (45), ಸುನೀಲ (26) ಮೃತ ದುರ್ದೈವಿಗಳು. ವಿನೋದ (14) ಸ್ಥಿತಿ ಗಂಭೀರವಾಗಿದೆ.
ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ದುರಂತ ಸಂಭವಿಸಿದೆ. ಮಳೆ ಬಂದಾಗ ಗಿಡದ ಆಶ್ರಯ ಪಡೆದಿದ್ದ ಇವರ ಮೇಲೆ ಯಮನಂತೆ ಬಂದು ಸಿಡಿಲು ಅಪ್ಪಳಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿರಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
ಇಂದು ಸಂಜೆ ವೇಳೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಮಳೆಯ ಅವಾಂತರಕ್ಕೆ ಬೆಂಗಳೂರು ಕೂಡ ಹೊರತಾಗಿಲ್ಲ. ಬಾಗಲಕೋಟೆ, ಚಿಕ್ಕಮಗಳೂರು, ವಿಜಯಪುರ, ವಿಜಯನಗರ, ಶಿವಮೊಗ್ಗ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾದ ವರದಿಯಾಗಿದೆ.