ಕೆಲಸಕ್ಕೆ ಹೊರಟಿದ್ದವರ ಮೇಲೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವು

Views: 36
ಚಿಕ್ಕೋಡಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರ್ಯಾಲಿ ಪಲ್ಟಿಯಾಗಿ ಮೂವರು. ಪಾದಾಚಾರಿಗಳು ಸ್ಥಳದಲ್ಲಿಯೇ ಮೃತಪಟ್ಟಿರೋ ದಾರುಣ ಘಟನೆ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಬಳಿ ನಡೆದಿದೆ.
ಶೇಡಬಾಳದ ನಿವಾಸಿಗಳಾದ ಚಂಪಾ ಲಕ್ಕಪ್ಪ ತಳಕ್ಕಟಿ (45), ಭಾರತಿ ವಡ್ಡಾಳೆ (30). ಮಾಲು ರಾವಸಾಬ ಐನಾಪೂರ (55) ಮೃತ ದುರ್ದೈವಿಗಳು. ಈ ಘಟನೆಯಲ್ಲಿ ಶೇಕವ್ವ ನರಸಪ್ಪ ಸರಸಾಯಿ (38) ಎಂಬುವರ ಸ್ಥಿತಿ ಚಿಂತಾಜನಕವಾಗಿದ್ದು ಕೂಡಲೇ ಅವರನ್ನು ಮಹಾರಾಷ್ಟ್ರದ ಮಿರಜ ಸಿವಿಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಾಲ್ಕು ಪಾದಚಾರಿಗಳು ಶೇಡಬಾಳ ಗ್ರಾಮದಿಂದ ಕೆಲಸಕ್ಕೆ ಹೊರಟ್ಟಿದ್ದರು. ಇದೇ ವೇಳೆ ಉಗಾರ ಕಡೆಗೆ ಹೊರಟ್ಟಿದ್ದ ಟ್ರ್ಯಾಕ್ಟರ್ ಟ್ರ್ಯಾಲಿ ಏಕಾಏಕಿ ಬಿದ್ದಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ಟ್ರ್ಯಾಕ್ಟರ್ ಟ್ರ್ಯಾಲಿಯ ಗಾಲಿ ಬಿಚ್ಚಿದ್ದಕ್ಕೆ ಈ ದುರ್ಘಟನೆ ಸಂಭವಿಸಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕಾಗವಾಡ ಶಾಸಕ ರಾಜು ಕಾಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಕಾಗವಾಡ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.