ರಾಜಕೀಯ

ಕೇಂದ್ರದಲ್ಲಿ ಸಂಪುಟ ಪುನಾರಚನೆ ಮತ್ತು ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ಸಭೆ

Views: 0

2024ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ.

ಈ ಮಧ್ಯೆ ಪ್ರಧಾನಿ ಮೋದಿ ನಿವಾಸದಲ್ಲಿ ಬುಧವಾರ ತಡರಾತ್ರಿ ಮಹತ್ವದ ಸಭೆ ನಡೆದಿದ್ದು, ಸಂಪುಟದ ಪುನಾರಚನೆ ಮತ್ತು ಸಂಭಾವ್ಯ ಬದಲಾವಣೆ ಸಿದ್ಧತೆ ಬಗ್ಗೆ ಮಾತುಕತೆ ನಡೆಸಲಾಯಿತು.

ಗೃಹ ಸಚಿವ ಅಮಿತ್ ಷಾ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ದಾ ಮತ್ತು ಹಿರಿಯ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಬಿಜೆಪಿ 2024ರ ಲೋಕಸಭಾ ಚುನಾವಣೆಗೆ ಹೊಸ ಬಗೆಯ ಕಾರ್ಯತಂತ್ರ ರೂಪಿಸಲು ಯೋಜಿಸಿದೆ.

ಡಿಸೆಂಬರ್ ನಲ್ಲಿ ನಾಲ್ಕು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ನಡೆಯಲಿದ್ದು, ಏಪ್ರಿಲ್, ಮೇ ನಲ್ಲಿ ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ನಡೆಸಲಾಯಿತು.

ಬಿಜೆಪಿ ಆಡಳಿತವಿರುವ ರಾಜ್ಯಗಳು ಹಾಗೂ ಇತರೆ ರಾಜ್ಯಗಳಲ್ಲಿ ಹೇಗೆ ಕಾರ್ಯತಂತ್ರ ರೂಪಿಸಬೇಕು ಎನ್ನುವ ಸಲಹೆಗಳನ್ನು ಹಿರಿಯರು ನೀಡಿದ್ದರು. ಚುನಾವಣಾ ಪ್ರಣಾಳಿಕೆ ಹೇಗಿರಬೇಕು. ಎರಡು ಅವಧಿಯಲ್ಲಿ ಎನ್ ಡಿಎ ಕೈಗೊಂಡಿರುವ ಸುಧಾರಣೆಗಳು ಬಿಜೆಪಿ ಕಾರ್ಯಕರ್ತರು ಪ್ರತಿ ಪಕ್ಷಗಳ ಕಾರ್ಯಸೂಚಿಗೆ ಸಮರ್ಥವಾಗಿ ಉತ್ತರ ನೀಡುವ ಪಡೆಯನ್ನು ಪ್ರತಿ ರಾಜ್ಯದಲ್ಲೂ ಕಟ್ಟುವ ಬಗ್ಗೆ ಮಾತುಕತೆ ನಡೆದಿದೆ.

ಪ್ರಧಾನ ಮಂತ್ರಿ ಮೋದಿ ಮಾತನಾಡಿ, ರಾಷ್ಟ್ರ ವ್ಯಾಪಿ ಏಕರೂಪ ನಾಗರಿಕ ಸಂಹಿತೆಗೆ ಜಾರಿಗೆ ತರುವ ಬಗ್ಗೆ ಸಭೆಯಲ್ಲಿ ಪ್ರಸ್ತಾವವಾಗಿದೆ.

Related Articles

Back to top button