ಪ್ರವಾಸೋದ್ಯಮ

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ:7ಮಂದಿ ಸಾವು 

Views: 148

ಕನ್ನಡ ಕರಾವಳಿ ಸುದ್ದಿ: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿ 7 ಮಂದಿ ಬಲಿಯಾಗಿರುವ ಘಟನೆ ಗೌರಿಕುಂಡ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಗುಪ್ತಕಾಶಿಯಿಂದ ಕೇದಾರನಾಥಕ್ಕೆ ಹೋಗುತ್ತಿದ್ದ ಆರ್ಯನ್ ಏವಿಯೇಷನ್‌ಗೆ ಸೇರಿದ ಹೆಲಿಕಾಪ್ಟರ್ ಗೌರಿಕುಂಡದ ಕಾಡಿನಲ್ಲಿ ಪತನಗೊಂಡಿದೆ.

ವಿಮಾನದಲ್ಲಿ ಪೈಲಟ್ ಸೇರಿದಂತೆ 7 ಜನರು ಪ್ರಯಾಣಿಸುತ್ತಿದ್ದರು. ಕೇದಾರನಾಥ ಕಣಿವೆಯಲ್ಲಿ ಹವಾಮಾನ ವೈಪರಿತ್ಯದಿಂದ ಹೆಲಿಕಾಪ್ಟರ್ ಪತನವಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಅಪಘಾತದ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿವೆ. ಈ ಘಟನೆ ಬಗ್ಗೆ ಹೆಚ್ಚಿನ ವಿವರವನ್ನು ಕಲೆ ಹಾಕುತ್ತಿದ್ದೇವೆ ಅಂತ ಉತ್ತರಾಖಂಡದ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಡಾ.ವಿ.ಮುರುಗೇಶನ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

 

Related Articles

Back to top button