ಜನಮನ
ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮಾನ್ ಚಾಂಡಿ ನಿಧನ

Views: 0
ಕೇರಳದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನ ಹಿರಿಯ ನಾಯಕ ಉಮ್ಮನ್ ಚಾಂಡಿ( 79) ಮಂಗಳವಾರ ನಿಧನರಾದರು.
ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಕೇರಳದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿ ಗಳಿಸಿದ ಭಾರತದ ಏಕೈಕ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಗಳಿಸಿದ್ದರು..
ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಲವು ನಾಯಕರು ಕಂಬನಿ ಮಿಡಿದಿದ್ದಾರೆ.