ಇತರೆ
ಕೊಡಗಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ

Views: 37
ಕೊಡಗು: ಕೊಡಗಿನಲ್ಲಿ ಬೆಳ್ಳಂಬೆಳ್ಳಗೆ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಕೊಡಗಿನ ಸಿದ್ದಾಪುರ ಸಮೀಪದ ಚನ್ನಯ್ಯನಕೋಟೆ ಗ್ರಾಮದಲ್ಲಿ ಘಟನೆ ನಡೆದಿದೆ.
ಚನ್ನಯ್ಯನಕೋಟೆ ನಿವಾಸಿ ಕಾತಯಿ (72) ಮೃತ ದುರ್ದೈವಿ. ಮಗನ ಮನೆಯಿಂದ ಹೊರ ಬರುತ್ತಿದ್ದ ವೇಳೆ ರೊಚ್ಚಿಗೆದ್ದ ಕಾಡಾನೆ ದಾಳಿ ಮಾಡಿದೆ. ವೃದ್ಧೆಯಾಗಿರುವುದರಿಂದ ಆನೆಯಿಂದ ತಪ್ಪಿಸಿಕೊಳ್ಳಲು ಆಗದೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಆನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚನ್ನಯ್ಯನಕೋಟೆ ಘಟನೆ ನಡೆದಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಅರಣ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.