ಕೊನೇ ಗಳಿಗೆಯಲ್ಲಿ ಚಿಕ್ಕಬಳ್ಳಾಪುರ ಟಿಕೆಟ್‌ಗೆ ವೀರಪ್ಪ ಮೊಯ್ಲಿ ಬಿಗಿ ಪಟ್ಟು,..!

Views: 77
ಚಿಕ್ಕಬಳ್ಳಾಪುರ ಟಿಕೆಟ್ ನನಗೆ ಬೇಕೆಂದು ಹಠ ಹಿಡಿದು ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮೂಲಕ ಒತ್ತಡ ಹೇರುತ್ತಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಟಿಕೆಟ್‌ಗೆ ಬಿಗಿ ಪಟ್ಟು ಹಿಡಿದಿರುವ ಪರಿಣಾಮ ಕಾಂಗ್ರೆಸ್ ಟಿಕೆಟ್ ಕಗ್ಗಂಟಾಗಿದೆ.
ಈ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿ ಮೂರನೇ ಬಾರಿಗೆ ಗೆಲುವು ಸಾಧಿಸಲಾಗದೆ ಸೋತ ಎಂ.ವೀರಪ್ಪ ಮೊಯ್ಲಿ ನಾಲ್ಕನೇ ಬಾರಿಗೆ ಸ್ಪರ್ಧಿಸಲು ದೆಹಲಿ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ.ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಅಂತಿಮ ಅಭ್ಯರ್ಥಿ ಆಯ್ಕೆ ಮಾಡುವುದು ಕಾಂಗ್ರೆಸ್ ವರಿಷ್ಠರಿಗೆ ಸವಾಲಾಗಿದೆ.ರಾಜ್ಯ ನಾಯಕರು ರಕ್ಷಾ ರಾಮಯ್ಯ ಹೆಸರು ಶಿಫಾರಸು ಮಾಡಿದ್ದಾರೆ. ಆದರೆ ಕೊನೇ ಗಳಿಗೆಯಲ್ಲಿ ಮೊಯ್ಲಿ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳುತ್ತಿದ್ದಾರೆ.
ರಾಜ್ಯದಲ್ಲಿ ಅನೇಕ ಸಚಿವರು, ಶಾಸಕರ ಮಕ್ಕಳು, ಸಂಬಂಧಿಕರಿಗೆ ಟಿಕೆಟ್ ನೀಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ , ಭ್ರಷ್ಟಾಚಾರ, ವಾಮಮಾರ್ಗದಲ್ಲಿ ಟಿಕೆಟ್ ಪಡೆಯುವುದಿಲ್ಲ ಎಂದಿದ್ದರು
ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ.ಕಳೆದ ಬಾರಿ ಸೋತರೂ ಜನರೊಂದಿಗೆ ಸಂಪರ್ಕ ಹೊಂದಿದ್ದೇನೆ. ನನ್ನ ರಾಜಕೀಯ ಜೀವನ ಕಾಂಗ್ರೆಸ್‌ನಲ್ಲಿ ಆರಂಭವಾಗಿದೆ. ಕಾಂಗ್ರೆಸ್‌ನಲ್ಲಿ ಅಂತ್ಯವಾಗಲಿದೆ ಎಂದಿದ್ದಾರೆ.