ಜನಮನ

ಕೊಪ್ಪದ ಹಾಸ್ಟೆಲ್ಲಿನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

Views: 0

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಸರಕಾರಿ ಹಾಸ್ಟೆಲ್ ನಲ್ಲಿ ಗುರುವಾರ ವಿದ್ಯಾರ್ಥಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಅಮೂಲ್ಯ ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದೆ. ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಮೃತ ಪೋಷಕರು ಆರೋಪಿಸಿದ್ದಾರೆ.

ಮೃತಪಟ್ಟ ಬಾಲಕಿ 9ನೇ ತರಗತಿ ವಿದ್ಯಾರ್ಥಿನಿ ಅಮೂಲ್ಯ (14) ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಪ್ರಕಾರ ವಿದ್ಯಾರ್ಥಿನಿ ಸರ್ಕಾರಿ ಮುರಾರ್ಜಿ ಶಾಲೆಯ ಹಾಸ್ಟೆಲ್ಲಿನ ವಾಶ್ ರೂಮ್ ಬಾಗಿಲಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಈ ಸಂಬಂಧ ಅಮೂಲ್ಯ ಅವರ ಹಾಸ್ಟೆಲ್ ಸಹಪಾಠಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

Related Articles

Back to top button
error: Content is protected !!