ಕರಾವಳಿ
ಕೊಲ್ಲೂರು ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಕಾಲು ಜಾರಿ ಬಿದ್ದು ಯುವಕ ಸಾವು

Views: 0

ಬಂಡೆಯ ತುದಿಯಲ್ಲಿ ನಿಂತು ಹತ್ತಿರದಿಂದ ಜಲಪಾತ ವೀಕ್ಷಣೆ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ನೀರಿಗೆ ಬಿದ್ದ ಯುವಕನನ್ನು ಭದ್ರಾವತಿ ಮೂಲದ ಶರತ್( 23) ಎಂದು ಗುರುತಿಸಲಾಗಿದೆ.
ಸ್ನೇಹಿತರೊಂದಿಗೆ ಕೊಲ್ಲೂರಿಗೆ ಬಂದಿದ್ದ ಶರತ್ ಅರಿಶಿನ ಗುಂಡಿ ಜಲಪಾತಕ್ಕೆ ತೆರಳಿದ್ದಾರೆ. ಬಂಡೆ ಕಲ್ಲಿನ ಮೇಲೆ ನಿಂತು ಫೋಟೋ ಶೂಟ್ ಮಾಡುತ್ತಿದ್ದ ವೇಳೆ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಜೊತೆಯಲಿದ್ದ ಸ್ನೇಹಿತರು ಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದ್ದಾರೆ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯರ ಸಹಕಾರದಿಂದ ಯುವಕನ ಮೃತ ದೇಹ ಪತ್ತೆಗಾಗಿ ಹುಡುಕಾಡುತ್ತಿದ್ದಾರೆ. ಕೆಳಗೆ ಬೀಳುತ್ತಿರುವ ದೃಶ್ಯವೂ ಮೊಬೈಲ್ ಕೆಮಾರದಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗುತ್ತಿದೆ.