ಕೊಲ್ಲೂರು ದೇವಸ್ಥಾನ ನಕಲಿ ಟ್ರಸ್ಟ್ ರಚನೆ: ಹರಕೆ, ದೇಣಿಗೆ ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚನೆ!

Views: 203
ಕೊಲ್ಲೂರು : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ಟ್ರಸ್ಟ್ ರಚಿಸಿ ಲಕ್ಷಾಂತರ ರೂಪಾಯಿ ವಂಚಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಹರಿದಾಡುತ್ತಿದೆ. ದೇಗುಲಕ್ಕೆ ದೇಣಿಗೆ, ಹರಕೆ ಸಲ್ಲಿಸುವ ಭಕ್ತರು ಇದರಲ್ಲಿ ದುಡ್ಡು ಕಳುಹಿಸಬಹುದು ಎಂದು ಮನವಿ ಮಾಡಲಾಗಿದೆ. ಭಕ್ತರೊಬ್ಬರು ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್‍ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ಬಂದಿದೆ. ಹೀಗಾಗಿ ರಾಘವೇಂದ್ರ ಹಾಗೂ ಧನಂಜಯ್ ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಕೇರಳದಲ್ಲಿ ಈ ಟ್ರಸ್ಟ್ ನೋಂದಣಿಯಾಗಿರೋದು ಗೊತ್ತಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. 2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮೋಸ ಮಾಡುತ್ತಿರುವುದು ತಿಳಿದುಬಂದಿದೆ. ಲಕ್ಷಗಟ್ಟಲೆ ದುಡ್ಡು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಈ ಬಗ್ಗೆ ಮುಜರಾಯಿ ಇಲಾಖೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.