ಇತರೆ

ಕೋಟ: ಕೋಡಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

Views: 93

ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದ ಕೋಡಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ಪಾರಂಪಳ್ಳಿ ಗ್ರಾಮದ ಕೋಡಿ ಸಮುದ್ರ ಕಿನಾರೆಯಲ್ಲಿ ಸುಮಾರು 35-45 ವರ್ಷದ ಅಪರಿಚಿತ ಮಹಿಳೆಯ ಶವವು ಕೊಳೆತ ರೀತಿಯಲ್ಲಿ ತೇಲುತ್ತಿರುವುದನ್ನು ನೋಡಿ ಸ್ಥಳೀಯರು ಕೊಡಲೇ ಕೋಟ ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಿರುತ್ತಾರೆ.

ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ ಸಿ. ಹಾಗೂ ಸಿಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

ಮೃತದೇಹವು ಬೇರೆ ಕಡೆಯಲ್ಲಿ ನೀರಿನಲ್ಲಿ ಅಥವಾ ಸಮುದ್ರದಲ್ಲಿ ಬಿದ್ದು ಮೃತಪಟ್ಟು ಸಮುದ್ರದಲ್ಲಿ ತೇಲಿ ಬಂದಿರುವ ಬಗ್ಗೆ  ಸಂಶಯಿಸಲಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button