ಶಿಕ್ಷಣ

ಕೋಟ: ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕ ಕ್ರೀಡಾಕೂಟ

Views: 41

ಕೋಟ: ದೈಹಿಕ ಸಾಮರ್ಥ್ಯಕ್ಕೆ ಕ್ರೀಡಾ ಕಾರ್ಯಕ್ರಮಗಳು ಸಹಕಾರಿ, ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗವಹಿಸಿ ಸಾಧನೆಯ ಮೆಟ್ಟಿಲುಗಳನ್ನು ಏರುವಂತಾಗಲಿ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದರು.

ಅವರು ಕೋಟ ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಇಲ್ಲಿನ 2023-24ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಲ್ಲಿ ಭಾಗವಹಿಸುವುದರ ಮೂಲಕ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿ ಭಾರತದ ಕೀರ್ತಿ ಹೆಚ್ಚಿಸಿ,ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಆ ಮೂಲಕವೇ ವಿವಿಧ ರೀತಿಯ ಉದ್ಯೋಗಾವಕಾಶಗಳನ್ನು ಕಾಣಲು ಸಾಧ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇದೇ ವೇಳೆ ವಿದ್ಯಾರ್ಥಿಗಳಿಂದ ಪಥ ಸಂಚಲನ, ಕ್ರೀಡಾಜ್ಯೋತಿ ಬೆಳಗಿಸುವಿಕೆ, ಕ್ರೀಡಾ ಪ್ರತಿಜ್ಞಾ ವಿಧಿ ಬೋಧನೆ ನಡೆಯಿತು.

ಕೋಟ ಠಾಣೆಯ ಮಹಿಳಾ ಠಾಣಾಧಿಕಾರಿ ಸುಧಾ ಪ್ರಭು ಕ್ರೀಡಾ ಧ್ವಜಾರೋಹಣಗೈದರು‌.ಕಾಲೇಜು ಅಭಿವೃದ್ಧಿ ಸಮಿತಿಯ ರಮೇಶ್ ಹೆಚ್ ಕುಂದರ್ ಪಾರಿವಾಳ ಹಾರಿಸುವ ಮೂಲಕ ಕ್ರೀಡಾಕಾರ್ಯಕ್ರಮಕ್ಕೆ ಚಾಲನೆ ನೀಡಿದರು..

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೋ.ಸುನೀತಾ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಸಂಯುಕ್ತ ಪ್ರೌಢಶಾಲಾ ಸಹಶಿಕ್ಷಕ ರಾಮದಾಸ್ ನಾಯಕ್,ಪ್ರಾಥಮಿಕ ಶಾಲಾ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕ ಮಂಜುನಾಥ ಕೆ.ಎಸ್, ಕಾಲೇಜಿನ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಶಂಕರ್ ನಾಯ್ಕ್ ಬಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುದಿನ ಕೋಡಿ,ವಿದ್ಯಾರ್ಥಿ ಮುಖಂಡರಾದ ಶ್ರವಣ್ ಶೆಟ್ಟಿ, ಅಶ್ವಿನಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ.ಮನೋಜ್ ಕುಮಾರ್ ಸ್ವಾಗತಿಸಿದರು.ಕಾರ್ಯಕ್ರಮವನ್ನು ಇತಿಹಾಸ ವಿಭಾಗದ ರಾಜಣ್ಣ ಎಂ ನಿರೂಪಿಸಿದರು.

Related Articles

Back to top button