ಕೋಟ ವಿವೇಕ ಪ.ಪೂ ಕಾಲೇಜು : ‘ಮಾದಕ ದ್ರವ್ಯ ವಿರೋಧಿ ದಿನ’ ಆರಕ್ಷಕ ಠಾಣಾಧಿಕಾರಿ ಅವರಿಂದ ಮಾಹಿತಿ

Views: 2
ಉಡುಪಿ: ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಪ್ರತಿ ವರ್ಷ ಜೂನ್ 26 ರಂದು ‘ಮಾದಕ ದ್ರವ್ಯ ವಿರೋಧಿ ದಿನ’ ಆಚಾರಿಸಲಾಗುತ್ತಿರುವ ಈ ಸಂದರ್ಭದಲ್ಲಿ ವಿವೇಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ದಿನದ ಕುರಿತಾಗಿ ಮಾಹಿತಿ ಕಾರ್ಯಕ್ರಮವನ್ನು ಕಾಲೇಜಿನ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಏರ್ಪಡಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಕೋಟ ಆರಕ್ಷಕ ಠಾಣೆಯ ಠಾಣಾಧಿಕಾರಿ ಶ್ರೀ ಶಂಭುಲಿಂಗಯ್ಯ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂದು ಯುವ ವರ್ಗವು ಎಳೆ ವಯಸ್ಸಿನಲ್ಲೇ ಅತ್ಯಂತ ಅಪಾಯಕಾರಿಯಾದ ಮಾದಕ ವಸ್ತುಗಳ ಸೇವನೆಯನ್ನು ರೂಢಿಸಿಕೊಂಡು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ತಿಳಿದೊ ಅಥವಾ ತಿಳಿಯದೇ ಮಾದಕ ವಸ್ತುಗಳ ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ.
ವಿದ್ಯಾರ್ಥಿಗಳು ಇಂತಹ ಕೆಟ್ಟ ವ್ಯಸನಕ್ಕೆ ಬಲಿಯಾಗದೇ ಜಾಗ್ರತೆಯಿಂದ ಇರಬೇಕು ಎಂದು ತಿಳಿಸಿ ವಿವಿಧ ಪ್ರಾಕಾರದ ಮಾದಕ ವಸ್ತು ಮತ್ತು ಅದರ ದುಷ್ಪರಿಣಾಮಗಳನ್ನು ಪವರ್ ಪಾಯಿಂಟ್ ಪ್ರಸೆಂಟೇಶನ್ ಮೂಲಕ ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಗದೀಶ ನಾವಡರು ಪ್ರಾಸ್ತಾವಿಕ ಮಾತಿನೊಂದಿಗೆ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಉಪನ್ಯಾಸಕರಾದ ಶ್ರೀ ಅಶೋಕ ಕುಮಾರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.