ಕೋಟ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಗಂಭೀರ ಸ್ಥಿತಿಯಲ್ಲಿದ್ದ ಶಿಕ್ಷಕ ಚಿಕಿತ್ಸೆಗೆ ಫಲಕಾರಿಯಾಗದೆ ಸಾವು

Views: 348
ಕನ್ನಡ ಕರಾವಳಿ ಸುದ್ದಿ: ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿಕ್ಷಕರೊಬ್ಬರು ತೆಕ್ಕಟ್ಟೆಯಿಂದ ಕೋಟಕ್ಕೆ ಹೋಗುವಾಗ ಅಗಸ್ಟ್ 8ರಂದು ಶುಕ್ರವಾರ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕರಿಗೆ ತಲೆ ಮತ್ತು ಮುಖ ಕೈಗಳಿಗೆ ಗಾಯಗಳಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆದರೆ ಮಂಗಳವಾರ ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶಿಕ್ಷಕ ಸಾವನ್ನಪ್ಪಿದ್ದಾರೆ.
ಶಿಕ್ಷಕ ಸಂತೋಷ್ ಅವರು ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಮೂರು ವರ್ಷದ ಹಿಂದೆ ಇವರಿಗೆ ಮದುವೆಯಾಗಿದ್ದು ಒಂದು ತಿಂಗಳ ಮಗುವಿದೆ ಎಂದು ತಿಳಿಯಲಾಗಿದೆ.
ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾದ ಇವರು, ಉತ್ತಮ ಸಾಹಿತಿ, ವಾಗ್ಮಿ, ನಿರೂಪಣೆಗಾರರಾಗಿ, ಶಾಲೆಯಲ್ಲಿ ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಶಿಕ್ಷಕರಾಗಿದ್ದಾರೆ.ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






