ಇತರೆ
ಕೋಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಟಿ ವಾಹನ ಡಿವೈಡರ್ ಗೆ ಡಿಕ್ಕಿ: ಹಲವರಿಗೆ ಗಾಯ

Views: 228
ಕನ್ನಡ ಕರಾವಳಿ ಸುದ್ದಿ:ರಾಷ್ಟ್ರೀಯ ಹೆದ್ದಾರಿ ಕೋಟ ಹೈಸ್ಕೂಲ್ ಬಳಿ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಹೊಡೆದ ಪರಿಣಾಮ ಹಲವರು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಹೊತ್ತಿಗೆ ಸಂಭವಿಸಿದೆ.
ಕೇರಳದಿಂದ ಕೊಲ್ಲೂರು ಮಾರ್ಗವಾಗಿ ಪ್ರವಾಸಕ್ಕೆ ಹೊರಟ್ಟಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಹೊಡೆದು ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಕ್ಕದ ಹೊಂಡಕ್ಕೆ ಉರುಳಿ ಬಿದ್ದಿದೆ.
ಸುಮಾರು 15 ಜನ ಪ್ರಯಾಣಿಕರಿದ್ದು ಅಪಘಾತದಲ್ಲಿ 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋಟ ಠಾಣಾಧಿಕಾರಿ ಸುಧಾ ಪ್ರಭು ಮತ್ತು ಸಿಬ್ಬಂದಿಯೊಡನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ತನಿಖೆ ನಡೆಸಿದ್ದಾರೆ.