ಶಿಕ್ಷಣ

ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಎಸ್ ಬಿ ಶೃತಿ, ಶರಧಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

Views: 51

ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ, ಇವರು ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ಇಲ್ಲಿ ನಡೆಸಿದ ಪದವಿ ಪೂರ್ವ ವಿದ್ಯಾರ್ಥಿಗಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಎಸ್ ಬಿ ಶೃತಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಹಾಗೂ ಚಿತ್ರಕಲೆ ಸ್ಪರ್ಧೆಯಲ್ಲಿ ಶರಧಿ ಇವರು ದ್ವಿತೀಯ ಸ್ಥಾನವನ್ನು ಪಡೆದು ವಿಭಾಗ ಮಟ್ಟದಿಂದ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು ಶುಭ ಹಾರೈಸಿರುತ್ತಾರೆ.

Related Articles

Back to top button