ಇತರೆ

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು, ಆತ್ಮಹತ್ಯೆಗೆ ಶರಣಾದ ತಾಯಿ

Views: 40

ಕನ್ನಡ ಕರಾವಳಿ ಸುದ್ದಿ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿಯಲ್ಲಿ ನಡೆದಿದೆ.

ಕುಸುಮಾ (35) ಎಂಬ ಮಹಿಳೆ ತನ್ನ 6 ವರ್ಷದ ಮಗ ಹಾಗೂ 7 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಕುಸುಮಾ ಹಾಗೂ ಆಕೆಯ ಪತಿ ನಡುವೆ ಜಗಳವಾಗಿತ್ತು. ಕೌಟುಂಬಿಕ ಕಲಹಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button