ಇತರೆ
ಗಂಗೊಳ್ಳಿ:ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವು

Views: 40
ಗಂಗೊಳ್ಳಿ: ತೀವ್ರ ರಕ್ತಸ್ರಾವದಿಂದ ಬಾಣಂತಿಯೊಬ್ಬಳು ಮೃತಪಟ್ಟ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ.
ಸುಮಾರು 4 ವರ್ಷದ ಹಿಂದೆ ಮದುವೆಯಾಗಿದ್ದ ಗಂಗೊಳ್ಳಿ ನಿವಾಸಿ ನಾಗರತ್ನ (38) ಗರ್ಭಿಣಿಯಾಗಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಾಗರತ್ನ ಅವರಿಗೆ ಹೆರಿಗೆ ನೋವು ಪ್ರಾರಂಭವಾಗಿದ್ದು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದು, ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದರು.
ಬಳಿಕ ನಾಗರತ್ನ ಅವರಿಗೆ ತೀವ್ರತರದ ರಕ್ತಸ್ರಾವವಾಗಿದ್ದು ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದರು. ಅದರಂತೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಯ ವೈದ್ಯರು ನಾಗರತ್ನಳನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ನಾಗರತ್ನಾ ಅವರು ಸಹೋದರ ಶೈಲೇಶ್ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.