ಕರಾವಳಿ

ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ ಪರಿಹಾರ ಮಂಜೂರು

Views: 78

ಕಳೆದ ನವೆಂಬರ್ ತಿಂಗಳಿನಲ್ಲಿ ಉಡುಪಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಭೀಕರ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಮಜೂರು ಮಾಡಿದೆ.

ಮೀನುಗಾರಿಕೆ ಸಚಿವರಾದ ಮಾಂಕಾಳ ಎಸ್. ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರನಿಧಿ ಸಮಿತಿಯ ಸಭೆಯಲ್ಲಿ ಪ್ರಕರಣದಿಂದ ಸಮಸ್ಯೆಗೀಡಾದ ಮೀನುಗಾರರಿಗೆ ಸೂಕ್ತ ಪರಿಹಾರ ನಿಟ್ಟಿನಲ್ಲಿ ಚರ್ಚಿಸಿ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಯಿತು. ಗಂಗೊಳ್ಳಿ ಬೋಟ್ ಅಗ್ನಿ ಅವಘಡದಿಂದ ಬೋಟ್ ಮಾಲೀಕರು ಆರ್ಥಿಕವಾಗಿ ದೊಡ್ಡ ನಷ್ಟವನ್ನು ಎದುರಿಸಿ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಈ ಘಟನೆಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಮುಖ್ಯಮಂತ್ರಿಗಳ ಪರಿಹಾರನಿಧಿಯ ಮೂಲಕ ಗರಿಷ್ಠ ಪರಿಹಾರ ಒದಗಿಸುವಂತೆ ಸಭೆಯಲ್ಲಿ ಸಚಿವರಿಗೆ ಸಮಿತಿಯ ಸದಸ್ಯರಾದ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.

ಕರಾವಳಿ ಜಿಲ್ಲೆಯ ಸಮಸ್ತ ಮೀನುಗಾರರ ಮನವಿಯನ್ನು ಪರಿಗಣಿಸಿ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿವಹಿಸಿದ ಮೀನುಗಾರಿಕಾ ಸಚಿವರಾದ ಮಾಂಕಾಳ ಎಸ್. ವೈದ್ಯ, ಗರಿಷ್ಠ ಪರಿಹಾರಕ್ಕೆ ಸರಕಾರವನ್ನು ಆಗ್ರಹಿಸಿದ ಸ್ಥಳೀಯ ಶಾಸಕರಾದ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಮೀನುಗಾರರ ಪರವಾಗಿ ಕೃತಜ್ಞತೆ ಸಲ್ಲಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button