ಸಾಮಾಜಿಕ

ಗಂಡ, ಮಗಳನ್ನು ಬಿಟ್ಟು ಆಟೋ ಚಾಲಕನೊಂದಿಗೆ ಗೋವಕ್ಕೆ ಹೆಂಡತಿ ಪರಾರಿ!

Views: 259

ಕನ್ನಡ ಕರಾವಳಿ ಸುದ್ದಿ: ಪ್ರಿಯಕರನೊಂದಿಗೆ ಕೇರಳದಿಂದ ಗೋವಾಕ್ಕೆ ಓಡಿ ಹೋಗಿದ್ದ ಮಹಿಳೆ ಹಾಗೂ ಆಕೆಯ ಪ್ರಿಯತಮನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ಮಹಿಳೆ ತನ್ನ ಪ್ರಿಯಕರನೊಂದಿಗೆ 12 ಲಕ್ಷ ಮೌಲ್ಯದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಳು. ಗೋವಾ ಪೊಲೀಸರು ಇದೀಗ ಈ ಜೋಡಿಯನ್ನು ಬಂಧಿಸಿ ಕೇರಳ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿ ಆಟೋ ಚಾಲಕ. ಮಹಿಳೆಯ ಮಗಳನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುವ ಹಾಗೂ ಮನೆಗೆ ತಂದು ಬಿಡುವ ಕೆಲಸ ಮಾಡುತ್ತಿದ್ದ. ಈ ವೇಳೆ ಮಹಿಳೆಗೆ ಆಟೋ ಚಾಲಕನೊಂದಿಗೆ ಸಲುಗೆ ಬೆಳೆದು ಇಬ್ಬರ ನಡುವೆ ಪ್ರೀತಿಯುಂಟಾಗಿದೆ. ಮಹಿಳೆ ಮನೆಯಲ್ಲಿದ್ದ ಚಿನ್ನಾಭರಣಗಳೊಂದಿಗೆ ಆಟೋ ಚಾಲಕನೊಂದಿಗೆ ಗೋವಾಕ್ಕೆ ಪರಾರಿಯಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಮಹಿಳೆಯ ಪತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ತನಿಖೆ ನಡೆಸಿದ್ದರು. ಈ ವೇಳೆ ಪರಾರಿಯಾದ ಜೋಡಿ ಗೋವಾದಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಗೋವಾ ಪೊಲೀಸರ ಸಹಕಾರದೊಂದಿಗೆ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Related Articles

Back to top button