ಗುತ್ತಿಗೆದಾರ ಸಂತೋಷ್ ನಿವಾಸಕ್ಕೆ ಐಟಿ ದಾಳಿ:32 ಬಾಕ್ಸ್‌ಗಳಲ್ಲಿ 45ಕೋಟಿ ರೂ ಪತ್ತೆ

Views: 0
ತಡರಾತ್ರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುತ್ತಿಗೆದಾರ ಸಂತೋಷ್ ನಿವಾಸಕ್ಕೆ ಐಟಿ ಮಾಡಿ ಪರಿಶೀಲನೆ ನಡೆಸಿದ ವೇಳೆ 45ಕೋಟಿ ರೂ. ಪತ್ತೆ ಯಾಗಿದೆ.
ಆದಾಯ ತೆರಿಗೆ ಅಧಿಕಾರಿಗಳು ಗುತ್ತಿಗೆದಾರರನ್ನು ಗುರಿಯಾಗಿರಿಸಿಕೊಂಡು ನಡೆಸಿರುವ ದಾಳಿಯಲ್ಲಿ ತೆಗೆದಷ್ಟು ಕಂತೆ ಕಂತೆ ಹಣ ಪತ್ತೆಯಾಗುತ್ತಿದೆ. ತಡರಾತ್ರಿ ರಾಜಾಜಿನಗರದ ಕೇತಮಾರನಹಳ್ಳಿಯಲ್ಲಿರುವ ಗುತ್ತಿಗೆದಾರ ಸಂತೋಷ್ ಕೃಷ್ಣಪ್ಪ ಅವರ ಅಪಾರ್ಟ್‌ಮೆಂಟ್ ಮೇಲೆ ನಡೆದ ದಾಳಿಯಲ್ಲಿ 45 ಕೋಟಿ ರೂ. ಪತ್ತೆಯಾಗಿದೆ. ವಿಚಾರಣೆ ವೇಳೆ ಸಂತೋಷ್ ಅವರು ಮಾಜಿ ಎಂಎಲ್‌ಸಿ ಸಿ. ಅವರ ಹೆಸರನ್ನು ಬಹಿರಂಗಪಡಿಸಿದ್ದಾರೆ.
ವಿಚಾರಣೆ ವೇಳೆ ಗುತ್ತಿಗೆದರ ಮಾಜಿ ಎಂಎಲ್‌ಸಿಯೊಬ್ಬರ ಹೆಸರನ್ನು ಬಾಯ್ಬಿಟ್ಟಿದ್ದು, ರಾಜಕೀಯ ನಾಯಕರಲ್ಲೂ ನಡುಕ ಉಂಟಾಗಿದೆ.
ತಡರಾತ್ರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ 45ಕೋಟಿ ರೂ. ಪತ್ತೆ ಯಾಗಿದೆ. 32 ಬಾಕ್ಸ್‌ಗಳಲ್ಲಿದ್ದ ಈ ಹಣವನ್ನು ಐಟಿ ಅಧಿಕಾರಿಗಳು ವ್ಯಾನ್‌ಗಳಲ್ಲಿ ತೆಗೆದುಕೊಂಡು ಹೋಗಿದ್ದಾರೆ.
ಇಡೀ ದಿನ ಅಪಾರ್ಟ್‌ಮೆಂಟ್‌ನ 5ನೇ ಮಹಡಿಯ ಫ್ಲಾಟ್‌ನಲ್ಲಿ ದಾಖಲೆಗಳನ್ನು ಪರಿಶೀಲಿಸಿದ ಸಂದರ್ಭದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಣ ಪತ್ತೆಯಾಗಿದೆ. ಈ ಹಣ ಮಾಜಿ ವಿಧಾನ ಪರಿಷತ್ ಸದಸ್ಯರೊಬ್ಬರಿಗೆ ಸೇರಿದ್ದು ಎಂಬ ಮಾಹಿತಿಯೂ ಲಭ್ಯವಾಗಿದೆ.
ಗುತ್ತಿಗೆದಾರರನ್ನು ವಿಚಾರಣೆಗೊಳಪಡಿಸಿದ ಸಂದರ್ಭದಲ್ಲಿ ಮಾಜಿ ಎಂಎಲ್‌ಸಿ ಹೆಸರನ್ನು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಪತ್ತೆಯಾಗಿರುವ ಹಣದ ಹೆಜ್ಜೆ ಜಾಡನ್ನು ಪತ್ತೆ ಮಾಡಲು ತನಿಖೆ ಕೈಗೊಂಡಿದ್ದಾರೆ.
ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಣ ಪತ್ತೆಯಾಗುತ್ತಿದ್ದಂತೆ 6ಕ್ಕೂ ಹೆಚ್ಚು ಕಾರುಗಳಲ್ಲಿ 1೦ಕ್ಕೂ ಹೆಚ್ಚು ಮಂದಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಗುತ್ತಿಗೆದಾರರನ್ನು ವಿಚಾರಣೆಗೊಳಪಡಿಸಿ ಐಟಿ ಅಧಿಕಾರಿಗಳ ತಂಡ ವಾಪಸ್ ತೆರಳಿದೆ.
ಪಂಚ ರಾಜ್ಯಗಳ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಈ ರಾಜ್ಯಗಳಿಗೆ ಚುನಾವಣೆಗಾಗಿ ಫಂಡಿಂಗ್ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ಜ್ಯೂವೆಲರಿ ಮಾಲೀಕರು, ಉದ್ಯಮಿಗಳು ಹಾಗೂ ಗುತ್ತಿಗೆದಾರರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದರು. ಈ ವೇಳೆ ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲೂ 42 ಕೋಟಿ ರೂ. 22 ಬಾಕ್ಸ್‌ಗಳಲ್ಲಿ ಪತ್ತೆಯಾಗಿದ್ದವು.
ಗುತ್ತಿಗೆದಾರ ಸಂತೋಷ್ ಕೃಷ್ಣಪ್ಪ ಮನೆಯಲ್ಲಿ ಐಟಿ ಅಧಿಕಾರಿಗಳ ದಾಳಿಯ ವೇಳೆ ಪತ್ತೆಯಾಗಿರುವ ಹಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಎಂಎಲ್‌ಸಿ ಸ್ಪಷ್ಟೀಕರಣ ಕೊಟ್ಟಿದ್ದಾರೆ.
ದಾಳಿ ಸಂದರ್ಭದಲ್ಲಿ ಗುತ್ತಿಗೆದಾರ ಸಂತೋಷ್ ಈ ಹಣ ತಮ್ಮದಲ್ಲ, ವಿಧಾನ ಪರಿಷತ್ ಸದಸ್ಯ ರಿಗೆ ಸೇರಿದ್ದು ಎಂದು ಹೇಳಿದ್ದರು.