ಶಿಕ್ಷಣ
ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿ:ಸಾಂಪ್ರದಾಯಿಕ ದಿನ ಮತ್ತು ಬಹುಮಾನ ವಿತರಣೆ

Views: 47
ಕುಂದಾಪುರ: ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿ ಕೋಟೇಶ್ವರದಲ್ಲಿ ಜ.26 ರಂದು ಗಣರಾಜ್ಯೋತ್ಸವ ಸಾಂಪ್ರದಾಯಿಕ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರಾದ ಶ್ರೀಮತಿ.ಅನುಪಮಾ.ಎಸ್.ಶೆಟ್ಟಿ ಮಕ್ಕಳಿಗೆ ನಮ್ಮ ಸನಾತನ ಧರ್ಮದ ತತ್ವಗಳನ್ನು ಎಲ್ಲರೂ ತಮ್ಮಲ್ಲಿ ಅಳವಡಿಸಿ ಕೊಳ್ಳುವ ಮೂಲಕ ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿ, ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಪ್ರಯುಕ್ತ ಸಿಹಿ ತಿಂಡಿ ವಿತರಿಸಲಾಯಿತು.ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ .ಮೋಹನ್.ಕೆ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹಶಿಕ್ಷಕಿ ಐಶ್ವರ್ಯ ನಿರೂಪಿಸಿ, ಸ್ವಾಗತಿಸಿದರು. ಸಹ ಶಿಕ್ಷಕಿ ಸೌಮ್ಯ ವಂದಿಸಿದರು.