‘ಗೃಹಲಕ್ಷ್ಮಿ’ ಯೋಜನೆ ನೋಂದಣಿಗೆ ಇಂದು ಚಾಲನೆ

Views: 0
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ಸಹಾಯಧನ ನೀಡುವ ಗ್ರಹಲಕ್ಷ್ಮಿ ಯೋಜನೆ ಜುಲೈ 19 ರಂದು ಬುಧವಾರ ಚಾಲನೆ ಆಗಲಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ನೋಂದಣಿ ಪ್ರಕ್ರಿಯೆಗೆ ಉದ್ಘಾಟಿಸಲಿದ್ದಾರೆ.
ಪ್ರಸ್ತುತ ಜಾರಿಯಲ್ಲಿರುವ ಭಾಗ್ಯ ಜ್ಯೋತಿ ಕುಟೀರ ಜ್ಯೋತಿ ಮತ್ತು ಅಮೃತ ಜ್ಯೋತಿ ಯೋಜನೆಗಳನ್ನು ವಿಲೀನಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಯಾರು ಅರ್ಹರು ? ಅಂತ್ಯೋದಯ, ಬಿಪಿಎಲ್, ಎಪಿಎಲ್ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ದಾಖಲೆಗಳು ಪಡಿತರ ಚೀಟಿಯ ಸಂಖ್ಯೆ, ಯಜಮಾನಿ ಮತ್ತು ಪತಿಯ ಆಧಾರ್ ಸಂಖ್ಯೆ ,ಆಧಾರ್ ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಪಾಸ್ ಪುಸ್ತಕ, ಫಲಾನುಭವಿಗಳು ಇಚ್ಚಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರ
ನೋಂದಣಿ ಹೇಗೆ? ಗ್ರಾಮ ಒನ್, ಮಂಗಳೂರು ಒನ್, ಕರ್ನಾಟಕವನ್ನು ಹಾಗೂ ಬಾಪೂಜಿ ಸೇವಾ ಕೇಂದ್ರದಲ್ಲಿ ಅಥವಾ ಪ್ರಜಾಪ್ರತಿನಿಧಿ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.
1 9 0 2 ಕೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್ಎಂಎಸ್ ಮಾಡುವ ಮೂಲಕ ಮಾಹಿತಿ ಪಡೆಯಬಹುದಾಗಿದೆ.
ಗೃಹಲಕ್ಷ್ಮಿ ಯೋಜನೆ ಜಾರಿಯಾಗುವ ಮುನ್ನವೇ ಚಿಕ್ಕ ಮಗಳೂರು ಜಿಲ್ಲೆಯ ವಿವಿಧಡೆ ನಕಲಿ ಅರ್ಜಿಗಳು ಮಾರಾಟದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.