ಜನಮನ
ಗೋಳಿಹೊಳೆ: ಜಿಂಕೆ ಅಡ್ಡ ಬಂದು ಆಟೋ ರಿಕ್ಷಾ ಪಲ್ಟಿ:ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯ

Views: 63
ಬೈಂದೂರು: ಗೋಳಿಹೊಳೆ ಗ್ರಾಮದ ಅರೆಶಿರೂರು 10ನೇ ಮೈಲುಗಲ್ಲು ಬಳಿ ಏಕಾಏಕಿ ಜಿಂಕೆ ಅಡ್ಡ ಬಂದ ಹಿನ್ನೆಲೆಯಲ್ಲಿ ಆಟೋರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಮಗುಚಿ ಬಿದ್ದು ನಾಲ್ವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಪ್ರಯಾಣಿಕರಾದ ಗಿರೀಶ್, ಉಷಾ, ಗಿರಿಪ್ರಸಾದ್, ಸಂಗೀತಾ ಅವರಿಗೆ ಗಂಭೀರ ಗಾಯಗೊಂಡಿದ್ದಾರೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.