ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಹೇಗೆ..? ವೇತನ ಎಷ್ಟು..?..ಇಲ್ಲಿದೆ ಮಾಹಿತಿ

Views: 68
ಕರ್ನಾಟಕದ ಕಂದಾಯ ಇಲಾಖೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಆರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕದ ಕಂದಾಯ ಇಲಾಖೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಖಾಲಿ ಇರುವ 1000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಲು 3/4/2024 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅಂಚೆ, ಖುದ್ದಾಗಿ ಸೇರಿದಂತೆ ಇತರ ಮಾಧ್ಯಮಗಳ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿಲ್ಲ.
ಕರ್ನಾಟಕದ ಪರೀಕ್ಷಾ ಪ್ರಾಧಿಕಾರದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ ಮತ್ತು ಸ್ಥಳೀಯ ವೃಂದ ಸೇರಿ ಒಟ್ಟು ಹುದ್ದೆಗಳ ಸಂಖ್ಯೆ 1000. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 21,400-42,0000 ರೂ.ಗಳು.
ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ದ್ವಿತೀಯ ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ. ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ, ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ನೇ ಪರೀಕ್ಷೆ ಎನ್‌ಐಓಎಸ್ ವತಿಯಿಂದ ನಡೆಸುವ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್ ಎಸ್‌ಸಿ. ಮೂರು ವರ್ಷಗಳ ಡಿಪ್ಲೊಮಾ ಅಥವ ಎರಡು ವರ್ಷಗಳ ಐಟಿಐ ಕೋರ್ಸ್ ಅಥವ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೊಮಾ ತತ್ಸಮಾನ ವಿದ್ಯಾರ್ಹತೆಯಾಗಿದೆ.
ಅರ್ಜಿಗಳನ್ನು ಸ್ವೀಕಾರ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿ ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3 ಬಿ ಅಭ್ಯರ್ಥಿಗಳಿಗೆ 38 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು. ನೇಮಕಾತಿ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಅಭ್ಯರ್ಥಿಗಳು ಕೇವಲ ಒಂದು ಜಿಲ್ಲೆ ಮಾತ್ರ ಅರ್ಜಿಯನ್ನು ಸಲ್ಲಿಕೆ ಮಾಡಬೇಕಿದೆ. ಒಂದಕ್ಕಿಂತ ಹೆಚ್ಚು ಜಿಲ್ಲೆಗೆ ಅರ್ಜಿ ಸಲ್ಲಿಕೆ ಮಾಡಿದಲ್ಲಿ ಸ್ಮರ್ಧಾತ್ಮಕ ಪರೀಕ್ಷೆ ಬರೆಯಲು ಬಳಸಲಾದ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುತ್ತದೆ. ಅರ್ಜಿಯಲ್ಲಿ ಕೋರಲಾದ ಒಂದು ಜಿಲ್ಲೆಗೆ ಮಾತ್ರ ಪರಿಗಣಿಸುವುದು. ಅರ್ಜಿಯಲ್ಲಿನ ಯಾವುದೇ ಮಾಹಿತಿಯನ್ನು ಯಾವುದೇ ಹಂತದಲ್ಲಿ ಬದಲಾವಣೆ/ ತಿದ್ದುಪಡಿ ಮಾಡಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ 2ಎ/ 2ಬಿ/ 3ಎ/ 3ಬಿ) ಅಭ್ಯರ್ಥಿಗಳು ರೂ. 750 ಶುಲ್ಕವನ್ನು ಪಾವತಿ ಮಾಡಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳು ರೂ. 500 ಶುಲ್ಕವನ್ನು ಪಾವತಿ ಮಾಡಬೇಕಿದೆ. ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ಸಹ ವಾಪಸ್ ನೀಡಲಾಗುವುದಿಲ್ಲ.