ರಾಜಕೀಯ

ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಕನಿಷ್ಠ ವೇತನ, ತುಟ್ಟಿ ಭತ್ಯೆ ಆದೇಶ

Views: 76

ಬೆಂಗಳೂರು, ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ, ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA) ಪಾವತಿಸುವ ಬಗ್ಗೆ ಆದೇಶವೊಂದನ್ನು ಹೊರಡಿಸಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಉಮಾ ಮಹಾದೇವನ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂ.ರಾಜ್) ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ.

ಸರ್ಕಾರದ ಆದೇಶದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರಿಗೆ ರೂ. 15,196.72 ಗಳ ಮಾಸಿಕ ಕನಿಷ್ಠ ವೇತನ ಪಾವತಿಸುವುದು, ಕನಿಷ್ಠ ವೇತನದ ಜೊತೆಗೆ ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು (VDA) ಪಾವತಿಸುವುದು, ಗ್ರಂಥಾಲಯ ಉಪಕರವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಉಳಿಸಿಕೊಂಡು, ಗ್ರಂಥಾಲಯ ಮೇಲ್ವಿಚಾರಕರ ವೇತನ ಹೆಚ್ಚಳದಿಂದಾಗುವ ಮೊತ್ತವನ್ನು ಉಪಕರದದಲ್ಲಿ ಭರಿಸಲು ಆದೇಶಿಸಲಾಗಿದೆ.

ಆದೇಶದ ವಿವರ; ಕಾರ್ಮಿಕ ಇಲಾಖೆಯು ಸರ್ಕಾರದ ಅಧಿಸೂಚನೆ ದಿನಾಂಕ 28/07/2022ರಲ್ಲಿ ಪರಿಷ್ಕರಿಸಿ ಹೊರಡಿಸಿರುವ ಅಧಿಸೂಚನೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳನ್ನು ಸೇರ್ಪಡೆಗೊಳಿಸಿ ರೂ. 16,382.52 ಗಳ ಕನಿಷ್ಠ ವೇತನವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದೆ.

ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ರೂ. 16,382.52 ಗಳನ್ನು ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA) ಪಾವತಿಸಲು ಹಾಗೂ ಗ್ರಂಥಾಲಯ ಉಪಕರವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಉಳಿಸಿಕೊಂಡು, ವ್ಯತ್ಯಾಸವಾಗುವ ಕನಿಷ, ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA) ವಾವತಿಸಲು ಸರ್ಕಾರವು ನಿರ್ಣಯಿಸಿದೆ

ಅದರಂತ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ದಿನಾಂಕ 04/09/2023ರಿಂದ ಜಾರಿಗೆ ಬರುವಂತೆ ಮಾಸಿಕ ಕನಿಷ್ಠ ವೇತನ ರೂ. 16,38252 ಗಳು ಮತ್ತು ವಾರ್ಷಿಕವಾಗಿ ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA) ಪಾವತಿಸಲು ಆದೇಶಿಸಿದೆ. ಗ್ರಂಥಾಲಯ ಉಪಕರವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಉಳಿಸಿಕೊಂಡು, ವ್ಯತ್ಯಾಸವಾಗುವ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA)ಪಾವತಿಸುವುದು ಎಂದು ಹೇಳಿದೆ.

ಮುಂದುವರೆದು 2023 24ನೇ ಸಾಲಿಗೆ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ರೂ. 16,382.52 ಗಳು ಮತ್ತು ವ್ಯಾಸವಾಗುವ ತುಟ್ಟಿ ಭತ್ಯೆ (VDA) ರೂ. 1542 ಗಳು ಸೇರಿ ಒಟ್ಟು 17,924.52 ರೂ.ಗಳನ್ನು ಪಾವತಿಸಲು ಆದೇಶಿಸಿದೆ.

Related Articles

Back to top button