ಇತರೆ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್: ಸ್ಥಳದಲ್ಲೇ ಮೂವರು ಸಾವು 

Views: 154

ಕನ್ನಡ ಕರಾವಳಿ ಸುದ್ದಿ: ವರಮಹಾಲಕ್ಷ್ಮಿ ಹಬ್ಬದ ದಿನವೇ ಭೀಕರ ದುರಂತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಹೈವೇ ಪಕ್ಕದ ಚರಂಡಿಗೆ ಖಾಸಗಿ ಬಸ್ ಉರುಳಿದ್ದು, ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ಹೈವೇಯಲ್ಲಿ ಈ ಘಟನೆ ನಡೆದಿದೆ.

ಘಟನೆಯಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಎನ್ನಲಾಗಿದ್ದು, ಚಾಲಕನ ನಿದ್ರೆಯ ಮಂಪರಿನಿಂದ ಅಪಘಾತ ನಡೆದಿರುವ ಸಾಧ್ಯತೆ ಇದೆ.

ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!