ಸಾಂಸ್ಕೃತಿಕ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ: ಕೋರ್ಟ್ ಸಮನ್ಸ್‌ ಜಾರಿ

Views: 111

ಕನ್ನಡ ಕರಾವಳಿ ಸುದ್ದಿ: ಕಾನೂನು ಬಾಹಿರವಾಗಿ ವಿದೇಶಿ ಬಾತುಕೋಳಿಗಳನ್ನು ಸಾಕಿದ್ದಕ್ಕೆ ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ವಿರುದ್ಧ ದೂರು ದಾಖಲಾಗಿದ್ದು ಕೋರ್ಟ್ ಸಮನ್ಸ್‌ ಜಾರಿ ಮಾಡಿದೆ.

ನಿಷೇಧಿತ ಬಾತುಕೋಳಿಗಳನ್ನ ಸಾಕಿದ್ದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್, ವಿಜಯಲಕ್ಷ್ಮಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅಡಿ ಟಿ.ನರಸೀಪುರದ ಸಿವಿಲ್‌ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು.

‘ಬಾರ್ ಹೆಡೆಡ್ ಗೂಸ್’ ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್, ಕೆಂಪಯ್ಯನ ಹುಂಡಿಯ ನಟ ದರ್ಶನ್ ತೋಟದ ಮೇಲೆ ದಾಳಿ ಮಾಡಿದ್ದ ಅರಣ್ಯಾಧಿಕಾರಿಗಳು, ಈ ವೇಳೆ ವಿದೇಶಿ ಪ್ರಭೇದದ ಬಾತು ಕೋಳಿ ವಶಕ್ಕೆ ಪಡೆದಿದ್ದರು. ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ.ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಜುಲೈ 4 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

Related Articles

Back to top button