ಚೈತ್ರಾ ಕುಂದಾಪುರ ಮದುವೆಗೆ ಬಂದ ಬಿಗ್ ಬಾಸ್ ಸ್ಪರ್ಧಿಗಳು

Views: 181
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಕಮಲಶಿಲೆಯ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ಕಶ್ಯಪ್ ಅವರ ಮದುವೆ ಸರಳವಾಗಿ ನೆರವೇರಿದೆ.
ಚೈತ್ರಾ ಕುಂದಾಪುರ ಅವರು 12 ವರ್ಷ ಪ್ರೀತಿಸಿದ ಗೆಳೆಯ ಶ್ರೀಕಾಂತ್ ಕಶ್ಯಪ್ ಅವರನ್ನು ಕೈ ಹಿಡಿದಿದ್ದು, ಇವರ ಮದುವೆ ಶಾಸ್ತ್ರ, ಸಂಪ್ರದಾಯಬದ್ಧವಾಗಿ ನಡೆದಿದೆ.
ಚೈತ್ರಾ ಕುಂದಾಪುರ ಅವರ ಮದುವೆಗೆ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್, ಗೋಲ್ಡ್ ಸುರೇಶ್, ಧನರಾಜ್ ಆಚಾರ್ ಅವರ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ರಜತ್ ಕಿಶನ್, ಚೈತ್ರಾ ಕುಂದಾಪುರ ಅವರಿಗೆ ಸಿಕ್ಕಾಪಟ್ಟೆ ಕಾಟ ಕೊಟ್ಟಿದ್ದರು. ಚೈತ್ರಾ ಕುಂದಾಪುರ, ರಜತ್ ಜಗಳ ವಿಕೋಪಕ್ಕೂ ಹೋಗಿತ್ತು. ಆದರೆ ರಿಯಾಲಿಟಿ ಶೋ ಮುಗಿದ ಮೇಲೆ ಆ ಘಟನೆಯನ್ನೆಲ್ಲಾ ಮರೆತಿರುವ ರಜತ್ ಕಿಶನ್ ಅವರು ಚೈತ್ರಾ ಕುಂದಾಪುರ ಅವರಿಗೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ್ ಅವರ ಈ ಮದುವೆ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮದುವೆ ಆಗುತ್ತಿರುವ ವ್ಯಕ್ತಿಯ ಫೋಟೋವನ್ನು ನಿನ್ನೆಯ ದಿನ ರೀವೀಲ್ ಮಾಡಿದ್ದು ಸಾಕಷ್ಟು ಜನರು ಅಚ್ಚರಿಗೊಂಡಿದ್ದಾರೆ. ಇದೀಗ ಚೈತ್ರಾ ಅವರ ಮದುವೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದರಲ್ಲಿ ತಾಳಿ ಕಟ್ಟುವಾಗ ಚೈತ್ರಾ ಕಣ್ಣೀರು ಹಾಕಿದ್ದಾರೆ.
ಕಣ್ಣೀರು ಹಾಕಿದ ಚೈತ್ರಾ ಕುಂದಾಪುರ ಅವರನ್ನು ಶ್ರೀಕಾಂತ್ ಸಮಾಧಾನ ಮಾಡಿದ್ದಾರೆ. ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ಕಶ್ಯಪ್ ಒಂದೇ ಕಾಲೇಜಿನಲ್ಲಿ ಓದಿದವರು. ಕಾಲೇಜು ದಿನಗಳಿಂದಲೂ ಇಬ್ಬರ ಮಧ್ಯೆ ಪ್ರೀತಿ ಇತ್ತು. ಇವರದ್ದು 12 ವರ್ಷಗಳ ಲವ್ ಸ್ಟೋರಿ.