ಸಾಂಸ್ಕೃತಿಕ

ಚೈತ್ರಾ ಕುಂದಾಪುರ ಮದುವೆ ಬೆನ್ನಲ್ಲೇ ತಂದೆಯಿಂದ ಸ್ಪೋಟಕ ಹೇಳಿಕೆ, ಚೈತ್ರಾಗೆ ಬಿಗ್ ಶಾಕ್..! 

Views: 1436

ಕನ್ನಡ ಕರಾವಳಿ ಸುದ್ದಿ:ಚೈತ್ರಾ ಕುಂದಾಪುರ ಅವರ ಮದುವೆಗೆ ಅವರ ಸ್ವಂತ ತಂದೆಯಿಂದಲೇ ಭಾರೀ ವಿರೋಧ ವ್ಯಕ್ತವಾಗಿದೆ. ಸುದ್ದಿಗಾರರ ಜೊತೆ ಇಂದು ಮಾತನಾಡಿದ ಬಾಲಕೃಷ್ಣ ನಾಯ್ಕ್ ಅವರ ತನ್ನ ಮಗಳು, ಅಳಿಯನ ಮೇಲೆ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಚೈತ್ರಾ ಕುಂದಾಪುರ ಮದುವೆಗೆ ನಾನು ಹೋಗಿಲ್ಲ. ಯಾಕಂದ್ರೆ ಅವರಿಬ್ಬರು ಕಳ್ಳರು. ಕಳ್ಳರು, ಕಳ್ಳರು ಮದುವೆ ಆಗೋದು. ಅದರ ಬಗ್ಗೆ ನಾನು ಏನು ಹೇಳೋದು. 12 ವರ್ಷದಿಂದ ಚೈತ್ರಾ ಕುಂದಾಪುರ ಗಂಡ ನಮ್ಮ ಮನೆಯಲ್ಲೇ ಇದ್ದವ. ಅವನು ಕಳ್ಳ. ಇವರು ಕಳ್ಳರು. ಕಳ್ಳ, ಕಳ್ಳರು ಇಬ್ಬರು ಮದುವೆ ಆಗಿದ್ದಾರೆ.

ಬಿಗ್‌ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ಇತ್ತೀಚೆಗಷ್ಟೇ ಬಹಳ ಸಂಭ್ರಮದಿಂದ ಮದುವೆ ಆಗಿದ್ದಾರೆ. 12 ವರ್ಷದಿಂದ ಪ್ರೀತಿಸಿದ ಗೆಳೆಯನನ್ನು ಕೈ ಹಿಡಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಚೈತ್ರಾ ಕುಂದಾಪುರ ಅವರು ತನ್ನ ಮದುವೆಗೆ ತಂದೆಯವರನ್ನು ಆಹ್ವಾನಿಸಿಲ್ಲ. ಜೊತೆಗೆ ಬಿಗ್ ಬಾಸ್ ರಿಯಾಲಿಟಿ ಶೋಗೆ ಹೋಗಲು ತಂದೆಯ ಅನುಮತಿ ಕೊಟ್ಟಿರಲಿಲ್ಲವಂತೆ. ಈ ಕುರಿತು ವಿವರವಾಗಿ ಮಾತನಾಡಿರುವ ಚೈತ್ರಾ ಕುಂದಾಪುರ ಅವರ ತಂದೆ ಆಕ್ರೋಶವನ್ನು ಹೊರ ಹಾಕಿದ್ದಾರೆ.

ದರೋಡೆ ಮಾಡೋದು, ದೇಶಕ್ಕೆ ದ್ರೋಹ, ವಂಚನೆ ಮಾಡೋದೇ ಇವರ ಕಸುಬು. ನಮ್ಮ ಕುಟುಂಬದ ಮಾನ, ಮರ್ಯಾದೆಯನ್ನು ತೆಗೆದಿದ್ದಾರೆ. ಅವಳನ್ನು ಕಂಡ್ರೆ ನನಗೆ ಆಗೋದಿಲ್ಲ. ಅವಳು ಎಂದಿಗೂ ಉದ್ಧಾರ ಆಗಲ್ಲ. ಅವರು ಮಾಡೋ ಕೆಟ್ಟ ಕೆಲಸಗಳಿಗೆ ನಾನು ಒಪ್ಪಿಗೆ ಕೊಡಲಿಲ್ಲ. ಅವರು ಮೋಸ, ವಂಚನೆಯಲ್ಲಿದ್ದರು. ನಾನು ಸತ್ಯ, ನ್ಯಾಯ, ಧರ್ಮದಲ್ಲಿ ಇರುವವನು. ತಾನೇ ಮನೆಯನ್ನು ನಡೆಸಿಕೊಂಡು ಹೋಗುತ್ತಿದ್ದೇನೆ ಅನ್ನೋ ಸುಳ್ಳು, ಸುಳ್ಳು ಮಾತನಾಡುತ್ತಾರೆ ಎಂದು ಬಾಲಕೃಷ್ಣ ನಾಯ್ಕ ಹೇಳಿದ್ದಾರೆ.

ಚೈತ್ರಾ ಕುಂದಾಪುರ ಅವರ ಮನೆಯಲ್ಲಿ ನಡೆಯುತ್ತಿದ್ದ ತಂದೆ, ಮಗಳ ಜಿದ್ದಾಜಿದ್ದಿ ಇದೀಗ ಹೊರ ಬಂದಿದೆ. ಈ ಹಿಂದೆ ಚೈತ್ರಾ ಕುಂದಾಪುರ ಅವರ ಮೇಲೆ ಕೇಳಿ ಬಂದಿದ್ದ ಆರೋಪಗಳ ಬಗ್ಗೆ ಬಾಲಕೃಷ್ಣ ನಾಯ್ಕ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮದುವೆಯಾದ ಖುಷಿಯಲ್ಲಿರುವ ಚೈತ್ರಾ ಕುಂದಾಪುರ ಅವರಿಗೆ ತಂದೆಯ ಮಾತುಗಳು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

Related Articles

Back to top button