ಕರಾವಳಿ

ಚೈತ್ರಾ ವಂಚನೆ ಪ್ರಕರಣ: ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್‌!

Views: 0

ಬೆಂಗಳೂರು : ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಬಿಜೆಪಿಯ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಮಂಗಳೂರಿನ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೋಟಿಸ್‌ ಜಾರಿ ಮಾಡಿದ್ದಾರೆ.

ನೋಟಿಸ್‌ ಪ್ರತಿ ತಲುಪಿದ ಮೂರು ದಿನದೊಳಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಬೆಂಗಳೂರು ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಎಸಿಪಿ ರೀನಾ ಸುವರ್ಣ ಅವರಿಂದ ನೋಟೀಸ್ ನೀಡಲಾಗಿದ್ದು, ಕಲಂ 91 ಸಿಆರ್‌ಪಿಸಿ ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ಇನ್ನು ಚೈತ್ರಾ ವಂಚನೆ ಬಗ್ಗೆ ತಮಗೆ ಮೊದಲೇ ಮಾಹಿತಿಯಿತ್ತು ಎಂದು ಸ್ವಾಮೀಜಿ ಪರಿಚಿತರ ಬಳಿ ಹೇಳಿಕೊಂಡಿದ್ದರು. ಸ್ವಾಮೀಜಿ ವಿಚಾರಣೆಗೆ ಬಾರದಿದ್ದರೆ ಕ್ರಮ ಜರುಗಿಸುತ್ತೇವೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಚೈತ್ರಾ ಐಟಿ ಇಲಾಖೆಗೆ ಬರೆದಿರುವ ಪತ್ರದಲ್ಲಿ ಮಂಗಳೂರಿನ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೆಸರು ಉಲ್ಲೇಖಿಸಿದ್ದರು. ಈ ವಿಚಾರದಲ್ಲಿ ನನಗೆ ಸ್ವಾಮೀಜಿ ಫೋನ್ ಮಾಡಿದ್ದರೆಂದು ಚೈತ್ರಾ ತಿಳಿಸಿದ್ದರು. ಚೈತ್ರಾ ಬಂಧನವಾದ ನಂತರ, ಮಾಧ್ಯಮಗಳೊಂದಿಗೆ ಮಾತನಾಡಿದ್ದ ವಜ್ರದೇಹಿ ಸ್ವಾಮೀಜಿ ಚೈತ್ರಾ ಬರೆದಿರುವ ಪತ್ರದ ಬಗ್ಗೆ ಯಾವುದೇ ತನಿಖೆಗೆ ಸಿದ್ದರೆಂದು ತಿಳಿಸಿದ್ದರು. ಸದ್ಯ ನೋಟಿಸ್‌ ಜಾರಿಯಾಗಿದೆ.

ಏನಿದು ಪ್ರಕರಣ? ವಿಧಾನಸಭೆ ಚುನಾವಣೆಗೆ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿರುವ ಆರೋಪ ಕೇಸ್‌ನ ಆರೋಪಿ ಚೈತ್ರಾ ಸೇರಿದಂತೆ 7 ಮಂದಿ ಬಂಧನವಾಗಿದ್ದರು. ಪ್ರಕರಣದಲ್ಲಿ ಈಗಾಗಲೇ ಚೈತ್ರಾ, ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲವೀರಪ್ಪ ಸ್ವಾಮೀಜಿ ಸೇರಿದಂತೆ ಹಲವರನ್ನು ವಿಚಾರಣೆ ನಡೆಯುತ್ತಿದೆ.

ಕಳೆದ ತಿಂಗಳು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸ್ವಾಮೀಜಿ, ” ನನಗೂ ಆಕೆಯ ಪ್ರಕರಣಕ್ಕೂ ಸಂಬಂಧ ಇಲ್ಲ. ಜುಲೈ ತಿಂಗಳಲ್ಲಿ ಹಿಂದೂ ಸಂಘಟನೆಯ ಸತ್ಯಜಿತ್ ಸುರತ್ಕಲ್ ಫೋನ್ ಮಾಡಿದ್ದರು. ಗೋವಿಂದ ಪೂಜಾರಿ ಟಿಕೆಟ್ ವಿಚಾರದಲ್ಲಿ ನನಗೆ ಪ್ರಶ್ನೆ ಮಾಡಿದ್ದರು. ಆದರೆ ನನಗೇನೂ ತಿಳಿದಿರಲಿಲ್ಲ, ನನಗೆ ಯಾಕೆ ಪ್ರಶ್ನೆ ಮಾಡುವುದೆಂದು ಕೇಳಿದ್ದೆ. ಆ ನಂತರ ಅವರೇ ಫೋನ್ ಮಾಡಿ ಚೈತ್ರಾ ಮತ್ತು ಅಭಿನವ ಹಾಲಶ್ರೀ ಹೆಸರಿದೆ ಎಂದು ತಿಳಿಸಿದ್ದರು” ಎಂದಿದ್ದರು.

ಮುಂದುವರೆದು, ” ಚೈತ್ರಾ ಜೊತೆ ಸಂಪರ್ಕ ಇದ್ದುದರಿಂದ ಆಕೆಗೆ ಫೋನ್ ಮಾಡಿ ಸ್ಪಷ್ಟನೆ ಕೇಳಿದ್ದೆ. ಮೂರು ಕೋಟಿ ದುಡ್ಡಿನ ಬಗ್ಗೆ ಕೇಳಿದೆ. ಒಂದೂವರೆ ಇದ್ದಿದ್ದು ಮೂರು ಕೋಟಿ ಆಗಿದೆ, ಇನ್ನು ಅದು 4-5 ಕೋಟಿ ಆಗಬಹುದು ಎಂದು ಆಕೆ ಹೇಳಿದ್ದಳು. ಸತ್ಯ ಹೇಳು ಎಂದಿದ್ದಕ್ಕೆ, ಆಕೆ ತನಗೇನೂ ಗೊತ್ತಿಲ್ಲ ಎಂದಿದ್ದರು

Related Articles

Back to top button