ಛೋಟಾ ಶಕೀಲ್ ಮತ್ತು ದಾವೂದ್ ಇಬ್ರಾಹಿಂ ಆಪ್ತ ಎಂದು ಕರೆ ಮಾಡಿ ರಾಮ ಮಂದಿರ ಸ್ಫೋಟಿಸುವ ಬೆದರಿಕೆ ಹಾಕಿದ್ದ ಯುವಕನ ಬಂಧನ

Views: 71
ಅಯೋಧ್ಯೆ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ 21 ವರ್ಷದ ಯುವಕನನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ತಾನು ದಾವೂದ್ ಇಬ್ರಾಹಿಂ ಆಪ್ತ ಎಂದು ಕರೆ ಮಾಡಿ ಬೆದರಿಕೆ ಹಾಕಿದ್ದ ಎಂದು ವರದಿಯಾಗಿದೆ.
ಕರೆ ಮಾಡಿದ ಯುವಕನನ್ನು ಇಂತೆಖಾಬ್ ಆಲಂ ಎಂದು ಗುರುತಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ಹೇಳಿದ್ದಾರೆ. ಪಲಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬಲುವಾ ಕಲಿಯಗಂಜ್‌ನಲ್ಲಿರುವ ಆರೋಪಿ ಮನೆಯಿಂದ ಬಂಧಿಸಲಾಯಿತು.
ಜನವರಿ 19 ರಂದು ನಾಗರಿಕರು ತುರ್ತು ಸಹಾಯವನ್ನು ಪಡೆಯಬಹುದಾದ 112 ಗೆ ಡಯಲ್ ಮಾಡಿದ್ದರು. ಅವನು ತನ್ನ ಹೆಸರು ಛೋಟಾ ಶಕೀಲ್ ಮತ್ತು ತಾನು ದಾವೂದ್ ಇಬ್ರಾಹಿಂನ ಆಪ್ತ ಎಂದು ಹೇಳಿಕೊಂಡಿದ್ದಾನೆ” ಎಂದು ಅಶೋಕ್ ಕುಮಾರ್ ಸಿಂಗ್ ಪಿಟಿಐಗೆ ತಿಳಿಸಿದರು.
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಆಲಂ ಫೋನ್‌ನಲ್ಲಿ ಹೇಳಿದ್ದಾನೆ, ಆತನ ಮೇಲೆ ಕ್ರಿಮಿನಲ್ ದಾಖಲೆ ಇಲ್ಲ, ಆದರೆ ಮಾನಸಿಕವಾಗಿ ಅಸ್ಥಿರವಾಗಿರುವಂತೆ ತೋರುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಪಲಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಆರೋಪಿಯ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.