ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ:ಮೊದಲ ಬಾರಿಗೆ ವಿಪಕ್ಷ ನಾಯಕನಿಲ್ಲದ ಅಧಿವೇಶನ

Views: 0
ರಾಜ್ಯ ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವಿಪಕ್ಷ ನಾಯಕನ ಸ್ಥಾನವನ್ನು ಕಾಲಿ ಬಿಡಲಾಗಿದೆ.
ಹೊಸ ಸರ್ಕಾರ ರಚನೆಯಾಗಿ 50 ದಿನ ಕಳೆದರೂ ಬಿಜೆಪಿಗೆ ಹೊಸ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ.ಸೋಮವಾರದಿಂದ ಆರಂಭಗೊಂಡ ಅಧಿವೇಶನದಲ್ಲಿ ಬಿಜೆಪಿಗೆ ಮುಜುಗರಕ್ಕೀಡಾಯಿತು.
ನಿಕಟ ಪೂರ್ವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಪ್ರತಿಪಕ್ಷದ ನಾಯಕನನ್ನಾಗಿ ಆಯ್ಕೆಯಾಗಬಹುದು ಎಂಬ ನಿರೀಕ್ಷಿಸಲಾಗಿತ್ತು. ಆದರೆ ಇವರಿಂದ ಪಕ್ಷಕ್ಕೆ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಬಸವನಗೌಡ ಪಾಟೀಲ್ ಯತ್ನಾಳ್ ಹೆಸರು ಪ್ರಸ್ತಾವವಾಗಿತ್ತು .ಇದಕ್ಕೆ ಯಡಿಯೂರಪ್ಪ ಅವರಿಗೆ ಇಷ್ಟವಿಲ್ಲ. ಪರಿಣಾಮ ಮಾಜಿ ಸಚಿವ ಸುನಿಲ್ ಕುಮಾರ್, ಅಶ್ವಥ್ ನಾರಾಯಣ್ ಹೆಸರು ಪ್ರಸ್ತಾವವಾಗಿದೆ. ಆದರೆ ಇವರನೆಲ್ಲರನ್ನು ಬಿಟ್ಟು ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರನ್ನು ವರಿಷ್ಠರ ಮುಂದೆ ಬಿಎಸ್ ವೈ ಬೇಡಿಕೆ ಸಲ್ಲಿಸಿದ್ದಾರೆ.ಇಲ್ಲವಾದರೆ ಮಾಜಿ ಸಚಿವ ಸುರೇಶ್ ಕುಮಾರ್ ಅವರನ್ನು ಮಾಡಿ ಎಂಬ ಸಲಹೆ ನೀಡಿದ್ದಾರೆ.
ಚುನಾವಣೆ ಸೋಲಿನ ಬಳಿಕ ತಮ್ಮ ಹಿತೈಷಿಗಳನ್ನು ಮುಂದೆ ಬಿಟ್ಟು ತಮ್ಮ ವೈಫಲ್ಯವನ್ನು ಮುಚ್ಚಿಡಲು ಹೊಂದಾಣಿಕೆ ರಾಜಕಾರಣದ ಕೂಗೆಬ್ಬಿಸಿ ಸಂತೋಷ್ ಬಣ ದುರ್ಬಲ ಗೊಂಡಿರುವುದು ಸ್ಪಷ್ಟವಾಗಿ ಗೋಚರಿಸಿದೆ.
ಈ ಮಧ್ಯೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಆಗಬೇಕು ಎಂದು ಯಡಿಯೂರಪ್ಪ ಸೂಚಿಸಿದ್ದಾರೆ.
ವಿರೋಧ ಪಕ್ಷ ನಾಯಕನ ಆಯ್ಕೆ ಸಂಬಂಧಪಟ್ಟಂತೆ ವೀಕ್ಷಕರು ಬರಬೇಕಿತ್ತು ಆದರೆ ಅವರಿಬ್ಬರೂ ಸೋಮವಾರದವರೆಗೂ ಬರಲಿಲ್ಲ ಮಂಗಳವಾರವು ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದಿದ್ದರೆ ಕಲಾಪದ ವೇಳೆ ಮುಜುಗರಕ್ಕೆ ಒಳಗಾಗಬೇಕಾಗುತ್ತದೆ. ಎಂಬ ಆತಂಕ ಶಾಸಕರಲ್ಲಿದೆ.
ಯಡಿಯೂರಪ್ಪ ಪರ ಇರುವ ಶಾಸಕರು ಯಾವುದೇ ಕಾರಣಕ್ಕೂ ಯತ್ನಾಳ ಅವರನ್ನು ಮಾಡಬಾರದು ಎಂಬ ಮೂಲಗಳಿಂದ ತಿಳಿಸಿವೆ.
ನೇರ ನಡೆ-ನುಡಿಯಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ನಾಯಕನನ್ನಾಗಿ ಮಾಡಬೇಕು ಎಂದು ಅರ್ಧಕ್ಕಿಂತಲೂ ಹೆಚ್ಚು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.