ಶಿಕ್ಷಣ

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್: ವಿಶ್ವ ಪರಿಸರ ದಿನಾಚರಣೆ

Views: 108

ಕನ್ನಡ ಕರಾವಳಿ ಸುದ್ದಿ: ಜೂನ್ 5 ರಂದು ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅವರು ಗಿಡವನ್ನು ನೆಟ್ಟು ,ಗಿಡವನ್ನು ಬೆಳೆಸಿ ನಾಡನ್ನು ಉಳಿಸಿ ಎಂದು ಹೇಳುತ್ತಾ, ಭವಿಷ್ಯದಲ್ಲಿ ಪ್ರತಿಯೊಂದು ಜೀವಿಯು ಬದುಕಬೇಕಾದರೆ ಪರಿಸರವನ್ನು ರಕ್ಷಿಸಬೇಕಾದ ಗುರುತರವಾದ ಜವಾಬ್ದಾರಿ ನಮ್ಮ ಮೇಲಿದೆ, ವಿದ್ಯಾರ್ಥಿ ಜೀವನದಲ್ಲಿ ಪರಿಸರವನ್ನು ಸಂರಕ್ಷಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ /ಬೋಧಕೇತರ ವೃಂದದವರು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related Articles

Back to top button