ಶಿಕ್ಷಣ
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್: ತಂಬಾಕು ಮುಕ್ತ ದಿನಾಚರಣೆ ಕಾರ್ಯಕ್ರಮ

Views: 182
ಕನ್ನಡ ಕರಾವಳಿ ಸುದ್ದಿ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ತಂಬಾಕು ಮುಕ್ತ ದಿನಾಚರಣೆಯ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಹಶಿಕ್ಷಕಿ ಶ್ರೀಮತಿ ಆಶಾಲತಾ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅವರು ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ದಿನಾಚರಣೆಯ ಉದ್ದೇಶದ ಬಗ್ಗೆ ತಿಳಿ ಹೇಳುತ್ತಾ ವಿದ್ಯಾರ್ಥಿ ಜೀವನದಲ್ಲಿ ಆರೋಗ್ಯಯುತ ಜೀವನವನ್ನು ತಮ್ಮದಾಗಿಸಿಕೊಳ್ಳುವಂತೆ ಹೇಳಿದರು.
ಈ ಕಾರ್ಯಕ್ರಮದಲ್ಲಿ ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.