ರಾಜಕೀಯ
ಜಯಪ್ರಕಾಶ್ ಹೆಗ್ಡೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು

Views: 111
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕುರಿತು ಪ್ರಕರಣ ದಾಖಲಾಗಿದೆ.
ಶಿರ್ವ ಗ್ರಾಮದ ಜಾರಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಪ್ರಚಾರ ಸಭೆ ನಡೆಸಿರುವ ಆರೋಪ ಬಂದಿದೆ.
ರಾತ್ರಿ 11:30ರ ಸುಮಾರಿಗೆ ಜಯಪ್ರಕಾಶ್ ಹೆಗ್ಡೆ ಶಿರ್ವ ಜಾರಂದಾಯ ದೈವಸ್ಥಾನದ ಜಾತ್ರೆಗೆ ತೆರಳಿದ್ದರು. ಅಲ್ಲಿ ಸಾರ್ವಜನಿಕರೊಂದಿಗೆ ಸಭೆ ನಡೆಸಿದ್ದರು. ಈ ಬಗ್ಗೆ ಕಾಪು ಪ್ರೈಯಿಂಗ್ ಸ್ಕ್ವಾಡ್ ಟೀಮ್‌ಗೆ ಮಾಹಿತಿ ಬಂದಿತ್ತು. ಅದರಂತೆ ತಂಡ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿತ್ತು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೈವಸ್ಥಾನದಲ್ಲಿ ತಡರಾತ್ರಿಯವರೆಗೆ ಕಾರ್ಯಕ್ರಮ ನಡೆಸಿದ ಆರೋಪ, ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೆ ಪ್ರಭಾವ ಬೀರಿದ ಆರೋಪದಲ್ಲಿ ಪ್ರೈಯಿಂಗ್ ಸ್ಕಾಡ್ ನೀಡಿದ ದೂರಿನ ಅನ್ವಯ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.