ಇತರೆ

ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ: ‌ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ತಂದೆ ಸಾವು

Views: 147

ಕನ್ನಡ ಕರಾವಳಿ ಸುದ್ದಿ: ರಸ್ತೆಯ ವಿಚಾರಕ್ಕೆ ಗಲಾಟೆ ನಡೆದು ಜಾತಿನಿಂದನೆ ಪ್ರಕರಣ ದಾಖಲಿಸುತ್ತೇವೆ ಎಂದು ಪರಿಶಿಷ್ಟ ಜಾರಿ ಕುಟುಂಬ ಎಚ್ಚರಿಸಿದ್ದರಿಂದ ಬೆದರಿದ ಯುವಕ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗನ ಸಾವಿನ ವಿಷಯ ತಿಳಿಯುತ್ತಿದ್ದಂತೆ ತಂದೆಯೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕೋನಹಳ್ಳಿ ಗ್ರಾಮದ ಮಾರ್ಗದಲ್ಲಿ ಮಹೆಬೂಬ್ (21) ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಷಯ ಕೇಳಿ ತಂದೆ ಸೈಯದ್ ಮೀರಸಾಬ್ ಮುಲ್ಲಾ (50) ಅವರಿಗೆ ಹೃದಯಾಘಾತವಾಗಿದೆ. ಚಿಕಿತ್ಸೆಗಾಗಿ ಕಲಬುರಗಿಗೆ ಒಯ್ದಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಜಮೀನಿಗೆ ತೆರಳುವ ರಸ್ತೆ ಕುರಿತು ಪರಿಶಿಷ್ಟ ಜಾತಿ ಕುಟುಂಬದೊಂದಿಗೆ ಜಗಳವಾಗಿತ್ತು. ಜಾತಿ ನಿಂದನೆ ಪ್ರಕರಣ ಕುರಿತು ಕುಟುಂಬದವರು ಬೆದರಿಕೆ ಹಾಕುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದು, ಈಶಪ್ಪ ನಾಯ್ಕಲ್ ಎಂಬುವರನ್ನು ಬಂಧಿಸಲಾಗಿದೆ ಎಂದು ವಡಗೇರಾ ಠಾಣೆ ಪಿಎಸ್‌ಐ ಮಹೆಬೂಬ್ ಅಲಿ ತಿಳಿಸಿದ್ದಾರೆ.

Related Articles

Back to top button
error: Content is protected !!